ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ:ತಾಲೂಕಿನ ರಾಷ್ಟೀಯ ಹೆದ್ದಾರಿ 52 ರಲ್ಲಿ ಆರತಿಬೈಲ್ ಘಟ್ಟದಲ್ಲಿ
ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಘಟನೆ ಶನಿವಾರ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಮಂಗಳೂರಿಗೆ ಬಿಸ್ಕತ್ತು, ಚಾಕಲೇಟ್ ತುಂಬಿಕೊಂಡು ಹೊರಟ್ಟಿದ್ದ ಲಾರಿ ಆರತಿಬೈಲ್ ಘಟ್ಟದ ಇಳಿಜಾರಿನಲ್ಲಿ ಸ್ಕಿಡ್ ಆಗಿ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಲಾರಿ ಜಖಂಗೊಂಡಿದ್ದು, ಚಾಲಕ, ನಿರ್ವಾಹಕರು ಅಪಾಯದಿ೦ದ ಪಾರಾಗಿದ್ದಾರೆ.
