ಸುದ್ದಿ ಕನ್ನಡ ವಾರ್ತೆ
ಶಿವಮೊಗ್ಗ: ಭಾರತದಂತಹ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಒಂದು ಪ್ರಧಾನಮಂತ್ರಿಯಾಗುವುದೇ ಮಹತ್ವದ ಸಾಧನೆಯಾಗಿದ್ದು, ಅತೀ ದೀರ್ಘ ಅವಧಿಯ ಪ್ರಧಾನಮಂತ್ರಿಯಾಗಿ ದಾಖಲೆ ನಿರ್ಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ ಅನುಪಮವಾದುದು ಎಂದು ಮಹಾಸ್ವಾಮಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಈ ಕುರಿತು ಸಂದೇಶ ನೀಡಿರುವ ಅವರು, ಅನೇಕ ಜನಪರ ಕಾರ್ಯಕ್ರಮಗಳ ಮೂಲಕ ದೇಶವನ್ನು ಸರಿಯಾದ ದಿಕ್ಕಿನತ್ತ ಮುನ್ನಡೆಸುತ್ತಿರುವ ಪ್ರಧಾನಿ ಮೋದಿ ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದಿದ್ದಾರೆ.

ದೇಶದ ಅಭಿವೃದ್ಧಿ ಮತ್ತು ಜನಸೇವೆಯ ಕಾರ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸಲು ಅವರಿಗೆ ಹೆಚ್ಚಿನ ಶಕ್ತಿ ಮತ್ತು ಆರೋಗ್ಯ ದೊರೆಯಲಿ ಎಂದು ಶ್ರೀಕರಾರ್ಚಿತ ದೇವತಾ ಸಾನ್ನಿಧ್ಯದಲ್ಲಿ ಪ್ರಾರ್ಥಿಸುತ್ತೇವೆ. ಮುಂದಿನ ದಿನಗಳಲ್ಲಿಯೂ ದೇಶವನ್ನು ಮುನ್ನಡೆಸುವ ನಾಯಕರಾಗಿ ಮೋದಿಯವರಂತಹ ಸಮರ್ಥ ವ್ಯಕ್ತಿತ್ವಗಳು ಹೊರಹೊಮ್ಮಲಿ ಎಂದು ಆಶಿಸುತ್ತೇವೆ ಎಂದು ಸ್ವಾಮೀಜಿಗಳು ತಿಳಿಸಿದ್ದಾರೆ.