ಸುದ್ದಿ ಕನ್ನಡ ವಾರ್ತೆ
ಶಿರಸಿ:ತಾಲೂಕಿನ ದೊಡ್ಡರು ಬಳಿ ಸಾರಿಗೆ ಬಸ್ಸು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ತಾಲೂಕಿನ ಬುಗಡಿಕೊಪ್ಪದ ಅನಿಲ ರವಿ ನಾಯ್ಕ (30) ಮೃತ ಬೈಕ್ ಸವಾರ. ಈತ ಶಿರಸಿ ಕಡೆಯಿಂದ ಹಾವೇರಿ ಕಡೆ ಚಲುತ್ತಿದ್ದಾಗ ದೊಡ್ಡರು ಬಳಿ ಹಾವೇರಿ ಕಡೆಯಿಂದ ಶಿರಸಿ ಕಡೆಗೆ ಬರುತ್ತಿದ್ದ ಬಸ್ಸಿಗೆ ಡಿಕ್ಕಿಯಾಗಿದೆ. ಅಪಘಾತ ರಭಸಕ್ಕೆ ರಸ್ತೆಯ ಮೇಲೆ ಬಿದ್ದ ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲಿಯೇ ಮೃತಟಪಟ್ಟಿದ್ದಾನೆ ಎಂದು ಬಸ್ಸಿನ ಚಾಲಕ ಈಶ್ವರ ಮನಿಗೇರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಸ್ಥಳಕ್ಕೆ ಡಿಎಸ್ಪಿ ಗೀತಾ ಪಾಟೀಲ ಭೇಟಿ ನೀಡಿದ್ದಾರೆ. ಟ್ರಾಫಿಕ್ ಪೊಲೀಸ್ ಠಾಣೆಯ ಪಿಎಸ್‌ಐ ದೇವೇಂದ್ರ ನಾಯ್ಕ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.