ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ:ಪಟ್ಟಣದ ರಾಷ್ಟ್ರೀಯ ಹೆದ್ದಾರಿ 52ರ ಕೆ. ಮಿಲನ್ ಹೋಟೆಲ್ ಸಮೀಪ ಕಾರು ಮತ್ತು ಸ್ಕೂಟಿ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಸ್ಕೂಟಿಯಲ್ಲಿದ್ದ ರಾಘವೇಂದ್ರ ಚೂಡಾಮಣಿ ಮರಾಠಿ ಹಾಗೂ ದಯಾನಂದ ಚಂದ್ರು ನಾಯಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಥಳೀಯರು ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ರವಾನಿಸಲಾಗಿದೆ. ಅಪಘಾತದಿಂದ ಸ್ಕೂಟಿ ಜಖಂಗೊಂಡಿದ್ದು, ಕೆಲಕಾಲ ಸಂಚಾರಕ್ಕೂ ಅಡಚಣೆ ಉಂಟಾಯಿತು.
ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
