ಸುದ್ಧಿಕನ್ನಡ ವಾರ್ತೆ
ಅಂಕೋಲಾ: ಬೇಲೇಕೇರಿ ಅದಿರುವ ನಾಪತ್ತೆ ಪ್ರಕರಣದಲ್ಲಿ ಕಾಂಗ್ರೇಸ್ ಶಾಸಕ ಸತೀಶ್ ಸೈಲ್ ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಮೊದಲ ಕೇಸ್ ನಲ್ಲಿ ಸೈಲ್ ಗೆ 5 ವರ್ಷ ಜೈಲು, 2 ನೇಯ ಕೇಸ್ ನಲ್ಲಿ 3 ವರ್ಷ ಜೈಲು ಮತ್ತು 9ಕೋಟಿ60 ಲಕ್ಷ ರೂ ದಂಡ ವಿಧಿಸಿ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.

ಅಂತೆಯೇ 3 ನೇಯ ಕೇಸ್ 420 ವಂಚನೆ ಪ್ರಕರಣದಲ್ಲಿ ಸತೀಶ್ ಸೈಲ್ ಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. 4 ನೇಯ ಕೇಸ್ ನಲ್ಲಿ 5 ವರ್ಷ ಜೈಲು, 5 ನೇಯ ಕೇಸ್ ನಲ್ಲಿ 7 ವರ್ಷ ಜೈಲು ಶಿಕ್ಷೆ ಸೇರಿ ಒಟ್ಟೂ 44 ಕೋಟಿ ರೂ ದಂಡ ವಿಧಿಸಲಾಗಿದೆ.

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 24 ರಂದು ಬೆ0ಗಳೂರಿನ ಜನಪ್ರತಿನಿಧಿಗಳ ಕೋರ್ಟ ಎಲ್ಲಾ 6 ಪ್ರಕರಣಗಳಲ್ಲಿ ಅಂಕೋಲಾ ಕಾಂಗ್ರೇಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ ತೀರ್ಪು ನೀಡಿ ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿತ್ತು. ಇದೀಗ ಸೈಲ್ ಗೆ ಶಿಕ್ಷೆಯ ಪ್ರಮಾಣವನ್ನು ಕೋರ್ಟ ಪ್ರಕಟಿಸಿದೆ.