ಸುದ್ದಿ ಕನ್ನಡ ವಾರ್ತೆ
ಚಿಕ್ಕಮಗಳೂರು:ರೌಡಿಗಳ ಸ್ಟೈಲ್ ನಲ್ಲಿ ಕಾರಿನಿಂದ ಇಳಿದು ನಡು ರಸ್ತೆಯಲ್ಲೇ ತಲ್ವಾರ್ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹೊರವಲಯದ ವಾಜಪೇಯಿ ಲೇಔಟ್ ನಲ್ಲಿ ನಡೆದಿದೆ.
ಮಹಮ್ಮದ್ ಸಮೀರ್ ಎಂಬ ವ್ಯಕ್ತಿಯೇ ಮಧ್ಯರಾತ್ರಿ ನಡು ರಸ್ತೆಯಲ್ಲಿ ತಲ್ವಾರ್ ನಿಂದ ಕೇಕ್ ಕತ್ತರಿಸಿದ್ದಾನೆ.
ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ ಮಾಡಿದ ಯುವಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಮಾರು ಹತ್ತಕ್ಕೂ ಹೆಚ್ಚು ಸ್ನೇಹಿತರ ಜೊತೆ ಲೇಔಟ್ ನಲ್ಲಿ ರಸ್ತೆ ಮಧ್ಯದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದರಿಂದ ಈ ಕೃತ್ಯ ಬಯಲಾಗಿದೆ. ಸಾರ್ವಜನಿಕ ವಲಯದಲ್ಲಿ ಲಾಂಗ್ ಹಿಡಿದು ಜನರಲ್ಲಿ ಭೀತಿ ಹುಟ್ಟಿಸಿ ಶಾಂತಿಭಂಗ ಮಾಡಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 20 ವರ್ಷದ ಯುವಕ ಮಹಮ್ಮದ್ ಸಮೀರ್ ಈತನ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರಿನ ಬೊನೆಟ್ ಮೇಲೆ ಸುಮಾರು ಐದು ಕೆಜಿಗೂ ಅಧಿಕ ತೂಕದ ಬೃಹತ್ ಕೇಕ್ ಇಟ್ಟು ತಲ್ವಾರ್ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದ.
