ಸುದ್ದಿ ಕನ್ನಡ ವಾರ್ತೆ

ಪಣಜಿ: ಗೋವಾದ ಕುಂಚೆಲಿಮ್ ಕೇಕ್ ಅಂಗಡಿ ಮತ್ತು ಚಿಕನ್ ಸೆಂಟರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಗದಗದ 22 ವರ್ಷದ ಈಶ್ವರ್ ಗೋಪಿ ಹರ್ನಿಶಿಕಾರಿಯನ್ನು ಗೋವಾದ  mapusa ಪೊಲೀಸರು ಬಂಧಿಸಿದ್ದಾರೆ.

ಬಂದಿತ ಆರೋಪಿಯನ್ನು  ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ 4 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ   ತನಿಖಾ ಕಾರ್ಯ ಕೈಗೆತ್ತಿಕೊಂಡಿದ್ದಾರೆ.