ಸುದ್ದಿ ಕನ್ನಡ ವಾರ್ತೆ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉತ್ತರ ಕನ್ನಡ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕಾ ಘಟಕ ಜೋಯಿಡಾ ವತಿಯಿಂದ ನಾಳೆ ದಿ: 25, ಜೂನ್, ಗುರುವಾರ ಎಸ್.ಎಸ್.ಎಲ್.ಸಿ.ಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಶೇ.100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಭಾಪೇಲಿ ಪ್ರೌಢಶಾಲೆಯಲ್ಲಿ ನಡೆಯಲಿದೆ ಎಂದು ಕ.ಸಾ.ಪ. ಜೋಯಿಡಾ ಘಟಕ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಿಗ್ಗೆ 10;30 ಕ್ಕೆ ನಡೆಯುವ ಈ ಕಾರ್ಯಕ್ರಮದ ಉದ್ಘಾಟನೆಯನ್ನು ತಹಶೀಲ್ದಾರ್ ಮಂಜುನಾಥ್ ಮುನ್ನೊಳ್ಳಿ ನಡೆಸಲಿದ್ದು, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎನ್. ಭಾರತಿ ಅಭಿನಂದನಾ ಪತ್ರ ವಿತರಿಸಲಿದ್ದಾರೆ. ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಬಿ.ಎನ್.ವಾಸರೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಜೋಯಿಡಾ ತಾಲೂಕಾ ನಾಲ್ಕನೆ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಶ್ರೀಮತಿ ಸುಕನ್ಯಾ ದೇಸಾಯಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಶೀರ್ ಅಹ್ಮದ್ ಶೇಖ್, ಕ.ಸಾ.ಪ. ಜಿಲ್ಲಾ ಸಮಿತಿ ಸದಸ್ಯರಾದ ಶ್ರೀಮತಿ ಸೀತಾ ದಾನಗೇರಿ, ಶಿಕ್ಷಣ ಪ್ರೇಮಿಗಳು ಹಾಗೂ ಮುಖಂಡರುಗಳಾದ ಸದಾನಂದ ದುಬಗಾರ, ಶಕುಂತಲಾ ಹಿರೇಗೌಡರ, ಜಿಲ್ಲಾ ಕುಣಬಿ ಸಮಾಜದ ಅಧ್ಯಕ್ಷ ಸುಭಾಷ ಗಾವಡಾ, ಮರಾಠಾ ಸಮಾಜದ ಅಧ್ಯಕ್ಷ ಚಂದ್ರಕಾಂತ ದೇಸಾಯಿ, ಎಸ್.ಡಿ.ಎಮ್.ಸಿ ಅಧ್ಯಕ್ಷ ಮೋಹನ ಮಾವಸ್ಕರ, ಮುಖ್ಯೋಪಾಧ್ಯಾಯ ಸುಭಾಷ ನಾಯ್ಕ, ಶಿಕ್ಷಣ ಪ್ರೇಮಿಗಳಾದ ಸುಭಾಷ ಮಾಂಜ್ರೇಕರ,ಶ್ರೀಧರ್ ದುಬಗಾರ ಉಪಸ್ಥಿತರಿರಲಿದ್ದಾರೆ.

ಕೆ.ಸಾ.ಪ. ಜೋಯಿಡಾ ಅಧ್ಯಕ್ಷ ಪಾಂಡುರಂಗ ಪಟಗಾರ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾಗಿ ಕ.ಸಾ.ಪ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.