ಸುದ್ದಿ ಕನ್ನಡ ವಾರ್ತೆ

ಬೆಳ್ತಂಗಡಿ:ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ ಸತ್ಯಾಸತ್ಯತೆ ತಿಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಲು ಮುಂದಾಗಿ ಕೊನೆಗೆ ವರಿಷ್ಠರ ಸೂಚನೆಯಂತೆ ಕೈಬಿಟ್ಟು ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಧರ್ಮಾಧಿಕಾರಿ
ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಸಂಸದ ಕ್ಯಾ. ಬ್ರಿಜೇಶ್ ಚೌಟ, ಬಿ.ಜೆ.ಪಿ. ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಶಾಸಕರುಗಳಾದ ಹರೀಶ್ ಪೂಂಜ, ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ಗುರುರಾಜ ಗಂಟಿಹೊಳೆ, ಯಶಪಾಲ್ ಸುವರ್ಣ, ರಾಜೇಶ್ ನಾಯಕ್, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕೊಡ್ಗಿ, ಕೆ. ಪ್ರತಾಪಸಿಂಹನಾಯಕ್,ಕಿಶೋರ್ ಕುಮಾರ್ ಮತ್ತು ಪಕ್ಷದ ಕಾರ್ಯಕರ್ತರಾದ ಜಯಂತ್ ಕೋಟ್ಯಾನ್ ಹಾಗೂ ಶ್ರೀನಿವಾಸ ರಾವ್ ಧರ್ಮಸ್ಥಳ ಉಪಸ್ಥಿತರಿದ್ದರು.