ಸುದ್ದಿಕನ್ನಡ ವಾರ್ತೆ
Goa: ಗೋವಾ ಮೋಪಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿತ್ತು. ಪ್ರವಾಸಿಗರ ಸುರಕ್ಷತೆಯ ಹಿನ್ನೆಲೆಯಲ್ಲಿ ವಿಮಾನವನ್ನು ಎಮರ್ಜನ್ಸಿ ಲ್ಯಾಂಡಿಂಗ್ ಮಾಡಲಾಯಿತು. ಕೂಡಲೇ ವಿಮಾನ ತಪಾಸಣೆಗೆ ಒಳಪಡಿಸಿದಾಗ ಇದು ಹುಸಿ ಬಾಂಬ್ ಬೆದರಿಕೆ ಎಂಬುದು ಖಚಿತವಾಗಿದೆ.
ಗೋವಾದ ಮೋಪಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಆತಂಕಕ್ಕೆ ಕಾರಣವಾಯಿತು. ಪ್ರವಾಸಿಗರು ಮತ್ತು ವಿಮಾನ ನಿಲ್ದಾಣದ ಕರ್ಮಚಾರಿಗಳಲ್ಲಿ ಆತಂಕ ಸೃಷ್ಠಿಯಾಯಿತು. ಅಕಾಸಾ ಪ್ಲೈಟ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ಕರೆ ಬಂದ ಹಿನ್ನೆಲೆಯಲ್ಲಿ ಈ ವಿಮಾನವನ್ನು ಎಮರ್ಜನ್ಸಿ ಲ್ಯಾಂಡಿಂಗ್ ಮಾಡಲಾಯಿತು.
ಗೋವಾ ಪ್ರವಾಸಿ ಸೀಜನ್ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ದೇಶ-ವಿದೇಶಿಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಗೋವಾಕ್ಕೆ ಆಗಮಿಸುತ್ತಿದ್ದಾರೆ. ಆದರೆ ಹುಸಿ ಬಾಂಬ್ ಬೆದರಿಕೆಯು ಗೋವಾಕ್ಕೆ ಆಗಮಿಸುವ ಪ್ರವಾಸಿಗರ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.