ಸುದ್ದಿ ಕನ್ನಡ ವಾರ್ತೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ತಣ್ಣಗೆ ಸುರಿಯುತ್ತಿದ್ದ ಮಳೆ ಇಂದು ಅಬ್ಬರಿಸಿದೆ.
ಕಳೆದ ರಾತ್ರಿಯಿಂದ ಭಾರಿ ಮಳೆಯಾಗುತ್ತಿದ್ದು, ಜು.೨ರಂದು ಜಿಲ್ಲೆಯಾದ್ಯಂತ ರೆಡ್ ಆಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜು.೨ರಂದು ರಜೆ ಘೋಷಿಸಲಾಗಿದೆ
ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.
ನಿರಂತರ ಮಳೆಗೆ ಜಿಲ್ಲೆಯಾದ್ಯಂತ ವ್ಯಾಪಕ ಹಾನಿಯಾಗಿದೆ. ಅಲ್ಲಲ್ಲಿ ಮನೆ ಕುಸಿತ, ಗೋಡೆ ಕುಸಿತ, ಮರಗಳು ಉರುಳಿ ಸಂಚಾರ ವ್ಯತ್ಯಯವಾಗಿರುವ ಘಟನೆಗಳು ವರದಿಯಾಗಿದೆ.
ಬಂಟ್ವಾಳ ತಾಲೂಕಿನಲ್ಲು ಕಳೆದೆರಡು ದಿನಗಳ ಗಾಳಿ,ಮಳೆಗೆ ವಿವಿಧ ಕಡೆಗಳಲ್ಲಿ ಮರ ಬಿದ್ದು ಮನೆಗಳಿಗೆ ಹಾನಿಯಾದ ಘಟನೆಗಳು ಸಂಭವಿಸಿದೆ.
