ಸುದ್ದಿ ಕನ್ನಡ
ಅಂಕೋಲಾ: ತಾಲೂಕಿನ ಅವರ್ಸಾ ಕವಲಗದ್ದೆ ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಬೆಂಗಳೂರು-ಗೋವಾ ಮಾರ್ಗದಲ್ಲಿ ಸೀಬರ್ಡ್ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ.
ಮರಕ್ಕೆ ಸಿಲುಕಿ ನಿಂತಿದ್ದರಿಂದ ಭಾರೀ ಅನಾಹುತ ತಪ್ಪಿದೆ.
ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಇಬ್ಬರಿಗೆ ಗಂಭೀರ ಹಾಗೂ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕಾರಣದ ಕುರಿತು ತನಿಖೆ ಮುಂದುವರಿದಿದೆ.
