ಸುದ್ದಿ ಕನ್ನಡ ವಾರ್ತೆ
ರವಿವಾರ ಜೋಯಿಡಾದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026 (SIR-2026) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ತಾಲೂಕು ಪಂಚಾಯತ್ ಹಾಗೂ ತಾಲೂಕು ಸ್ವೀಪ್ ಸಮಿತಿ, ಜೋಯಿಡಾ ಇವರ ವತಿಯಿಂದ ಅರಿವು ಕೇಂದ್ರ, ಜೋಯಿಡಾದಲ್ಲಿ ವಿದ್ಯಾರ್ಥಿಗಳಿಗಾಗಿ ಚದುರಂಗ ಸ್ಪರ್ಧೆಯನ್ನು ಆಯೋಜಿಸಲಾಯಿತು.

ಸ್ಪರ್ಧೆಯನ್ನು ಮೂರು ವಿಭಾಗಗಳಲ್ಲಿ ನಡೆಸಲಾಯಿತು. ಅವುಗಳೆಂದರೆ: *ಓಪನ್ ವಿಭಾಗ (6 ರಿಂದ 10 ವರ್ಷ), ಹುಡುಗಿಯರ ವಿಭಾಗ (12 ರಿಂದ 15 ವರ್ಷ) ಹಾಗೂ ಹುಡುಗರ ವಿಭಾಗ (12 ರಿಂದ 15 ವರ್ಷ)*. ಒಟ್ಟು *30 ವಿದ್ಯಾರ್ಥಿಗಳು* ಸ್ಪರ್ಧೆಯಲ್ಲಿ ನೋಂದಾಯಿಸಿಕೊಂಡು ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಎಸ್ಐಆರ್ 2026ರ ಉದ್ದೇಶ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಮಹತ್ವ ಹಾಗೂ ಚದುರಂಗ ಸ್ಪರ್ಧೆಯ ನಿಯಮಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಲಾಯಿತು.. ನಂತರ ಸುಮಾರು ನಾಲ್ಕು ಸುತ್ತುಗಳಲ್ಲಿ ಸ್ಪರ್ಧೆಯನ್ನು ಯಶಸ್ವಿಯಾಗಿ ನಡೆಸಲಾಯಿತು.
ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ *ಶ್ರೀಮತಿ ಭಾರತಿ ಎನ್.* ಅವರು ಪ್ರಶಸ್ತಿ ಪತ್ರ ಹಾಗೂ ಬಹುಮಾನಗಳನ್ನು ವಿತರಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಸ್ಐಆರ್-2026ರ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ, ತಮ್ಮ ಪೋಷಕರು, ಕುಟುಂಬದ ಸದಸ್ಯರು ಹಾಗೂ ನೆರೆಹೊರೆಯವರಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ-2026 ಕುರಿತು ಜಾಗೃತಿ ಮೂಡಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದ ಕೊನೆಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಸ್ಪರ್ದಾಳುಗಳಿಗೆ ಲಘುಪಹಾರ ಮತ್ತು ಪ್ರಮಾಣಪತ್ರ ವಿತರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಅರಿವು ಕೇಂದ್ರದ ಮೇಲ್ವಿಚಾರಕರು, ಪೋಷಕರು ಹಾಗೂ ತಾಲೂಕು ಸ್ವೀಪ್ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
