ಸುದ್ದಿ ಕನ್ನಡ ವಾರ್ತೆ
​ಸುಳ್ಯ: ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಇಂದು ಮಂಗಳವಾರ ಬೆಳಿಗ್ಗೆ ನಿಧನರಾದರು.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಯಲ್ಲಿದ್ದರು.
​ದೇಶದಾದ್ಯಂತ 140 ಕ್ಕೂ ಅಧಿಕ ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ಅವರು ದೇಶದ ತೂಗು ಸೇತುವೆಗಳ ಸರದಾರ ಎಂಬ ಪ್ರಶಂಸೆಗೆ ಪಾತ್ರರಾಗಿದ್ದರು. 2017 ರಲ್ಲಿ ಭಾರತ ಸರ್ಕಾರವು ಅವರಿಗೆ ಪದ್ಮಶ್ರೀ ನೀಡಿ ಗೌರವಿಸಿತ್ತು.

 

​ಇಂಜಿನಿಯರಿಂಗ್ ಪದವೀಧರರಾದ ಬಳಿಕ ಆಯಶಿಲ್ಪ ಇಂಜಿನಿಯರಿಂಗ್ ವರ್ಕ್ಸ್ ಸಂಸ್ಥೆ ಆರಂಭಿಸಿದ ಇವರು ಸೇತುವೆಗಳಿಲ್ಲದ ನಾಡಿನಲ್ಲಿ ತೂಗು ಸೇತುವೆ ನಿರ್ಮಿಸುವ ಮೂಲಕ ಪ್ರಸಿದ್ಧರಾದರು.ಮೃತರು ಪತ್ನಿ , ಮಕ್ಕಳು ಸಹಿತ ಅಪಾರ ಬಂಧು ಬಳಗವನ್ನಗಲಿದ್ದಾರೆ.