ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ:ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ಶುಕ್ರವಾರ ಮುಂಜಾನೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

​ಟ್ಯಾಂಕರ್ ಪಲ್ಟಿಯಾದರೂ ಅದೃಷ್ಟವಶಾತ್ ಗ್ಯಾಸ್ ಸೋರಿಕೆಯಾಗಿಲ್ಲ. ಇದರಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

 

​ಘಟ್ಟದ ತೀವ್ರ ತಿರುವುಗಳು, ಇಳಿಜಾರು ಹಾಗೂ ಮಳೆಗಾಲದಲ್ಲಿ ರಸ್ತೆ ಜಾರುವ ಪರಿಸ್ಥಿತಿಯಿಂದಾಗಿ ಈ ಮಾರ್ಗ ಅಪಾಯಕಾರಿಯಾಗಿದ್ದು, ವಾಹನ ಚಾಲಕರು ಅತ್ಯಂತ ಎಚ್ಚರಿಕೆಯಿಂದ ಸಂಚರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.