ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾದ ಕೆಲ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಗುರುವಾರ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಸಕೋರ್ಡಾದ ಡ್ಯೂಲ್ಮೋಲ್ನಲ್ಲಿರುವ ರಗಡಾ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಸೇತುವೆ ಮುಳುಗಿದ್ದು, ಈ ಪ್ರದೇಶದಲ್ಲಿ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಗುರುವಾರ ಸಂಜೆಯಿಂದ ಧಾರಾಬಾಂದೋರಾ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿಯ ನೀರಿನ ಮಟ್ಟ ಏರಿಕೆಯಾಗಿದೆ.
ರಗಡಾ ನದಿಯ ನೀರಿನ ಮಟ್ಟ ಏರಿಕೆಯಾಗಿ ಸೇತುವೆಯ ಮೇಲೆ ನೀರು ಹರಿಯುತ್ತಿರುವುದರಿಂದ ಶುಕ್ರವಾರ ಒಂದು ಊರಿನಿಂದ ಮತ್ತೊಂದು ಊರಿಗೆ ಸಂಪರ್ಕ ಸಾಧ್ಯವಾಗದೆಯೇ ಜನತೆ ಕಂಗಾಲಾಗಿದ್ದಾರೆ. ಮತ್ತೆ ಮಳೆ ಹೆಚ್ಚಾದರೆ ಹಲವು ಮನೆಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.
