ಸುದ್ದಿ ಕನ್ನಡ ವಾರ್ತೆ
ಜಮ್ಮು ಮತ್ತು ಕಾಶ್ಮೀರದ ಪೋಂಚ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ದಿಢೀರ್ ಮೇಗಸ್ಪೋಟ ಸಂಭವಿಸಿ ಭಾರಿ ಪ್ರವಾಹ ಉಂಟಾಗಿ 11 ಜನ ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ. ಈ ಪ್ರವಾಹದಲ್ಲಿ ಇನ್ನೂ ಹಲವರು ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗುತ್ತಿದ್ದು , ಹಲೋ ಮನೆಗಳು ಸಂಪೂರ್ಣ ಕೊಚ್ಚಿಹೋಗಿದೆ, ಇಷ್ಟೇ ಅಲ್ಲದೆ ವಾಹನಗಳು ತೇಲಿ ಹೋಗಿದೆ.

ಪೋಂಚ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ರಸ್ತೆಗಳು ಕೊಚ್ಚಿ ಹೋಗಿದೆ, ಸಂಪರ್ಕ ಕಡಿತಗೊಂಡಿದೆ.
ಮುಂದಿನ ಕೆಲ ಗಂಟೆಗಳಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಜನತೆ ಎಚ್ಚರದಿಂದ ಇರುವಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ಜನರನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲು ರಕ್ಷಣಾ ತಂಡಗಳು ಕಾರ್ಯನಿರ್ವಹಿಸುತ್ತಿದೆ.