ಸುದ್ದಿ ಕನ್ನಡ ವಾರ್ತೆ
ಜಪಾನ:ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಜಪಾನ್ ಓಪನ್ 2026 ಮಹಿಳೆಯರ ಸಿಂಗಲ್ಸ್ ಫೈನಲ್‌ನಲ್ಲಿ ಆತಿಥೇಯ ದೇಶದ ಅಕಾನೆ ಯಮಗುಚಿ ಅವರನ್ನು ನೇರ ಗೇಮ್‌ಗಳಲ್ಲಿ 21-17, 21-17 ಅಂತರದಿಂದ ಮಣಿಸಿ ಪ್ರಶಸ್ತಿಯನ್ನು ಗೆದ್ದಿದ್ದಾರೆ.
ಈ ಗೆಲುವಿನೊಂದಿಗೆ ಸಿಂಧು ತಮ್ಮ ವೃತ್ತಿಜೀವನದ ಮೊದಲ BWF World Tour Super 750 ಪ್ರಶಸ್ತಿಯನ್ನು ಗೆದ್ದಿದ್ದು, ಜಪಾನ್ ಓಪನ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಶಟ್ಲರ್ ಎಂಬ ಐತಿಹಾಸಿಕ ಸಾಧನೆಯನ್ನೂ ಮಾಡಿದ್ದಾರೆ. ಸುಮಾರು ಎರಡು ವರ್ಷಗಳ ಬಳಿಕ ಸಿಂಧು ಪ್ರಮುಖ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದು ಭರ್ಜರಿ ಕಮ್‌ಬ್ಯಾಕ್ ಮಾಡಿದ್ದಾರೆ.
