ಸುದ್ಧಿಕನ್ನಡ ವಾರ್ತೆ
ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಇನ್ನೂ 5 ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಂಗಳವಾರದಿಂದ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯಲ್ಲೊ ಅಲರ್ಟ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆ ಹಾಗೂ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಯಾದಗಿರಿ, ಕೊಪ್ಪಳ, ವಿಜಯಪುರ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

 

ಕಳೆದ ಕೆಲ ಹಲವು ದಿನಗಳಿಂದ ವಿಶ್ರಾಂತಿ ಪಡೆದಿದ್ದ ಮಳೆರಾಯ ಇದೀಗ ಕರ್ನಾಟಕ ರಾಜ್ಯಾದ್ಯಂತ ಆರ್ಭಟಿಸಲು ಆರಂಭಿಸಿದ್ದಾನೆ. ಮಳೆಯ ಆರಂಭವು ರೈತರ ಮೊಗದಲ್ಲಿ ಹರ್ಷ ತಂದಿದೆ.