ಸುದ್ದಿ ಕನ್ನಡ ವಾರ್ತೆ
​ಜೋಯಿಡಾ: ಕೆಲ ದಿನಗಳ ಹಿಂದೆ ತಾಲೂಕಿನ ಕುಣಬಿ ಸಮಾಜದ ಭವನದಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರದಲ್ಲಿ ತಪಾಸಣೆಗೊಳಲಾದ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣಾ ಸಮಾರಂಭ ಯಶಸ್ವಿಯಾಗಿ ನಡೆಯಿತು.

​ಜಾಂಬಗಿ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಬೆಳಗಾವಿ ಹಾಗೂ ರಾಮನಗರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ, ಕುಣಗಣಿಯ ಶ್ರೀ ರಘುವೀರ ಗುರೂಜಿಯವರ ಮಾರ್ಗದರ್ಶನದಲ್ಲಿ ಈ ಕನ್ನಡಕ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
​ಶಿಬಿರದಲ್ಲಿ ಕಣ್ಣಿನ ತಪಾಸಣೆ ನಡೆಸಿಸಿಕೊಂಡು ಕನ್ನಡಕ ಅಗತ್ಯವಿದೆ ಎಂದು ವೈದ್ಯರು ಗುರುತಿಸಿದ್ದ ನೂರಾರು ಫಲಾನುಭವಿಗಳಿಗೆ ಉಚಿತವಾಗಿ ಉತ್ತಮ ಗುಣಮಟ್ಟದ ಕನ್ನಡಕಗಳನ್ನು ವಿತರಿಸಲಾಯಿತು.

ಈ ವೇಳೆ ವೈದ್ಯರು ಕಣ್ಣಿನ ಆರೋಗ್ಯದ ಮಹತ್ವ, ನಿಯಮಿತ ತಪಾಸಣೆಯ ಅಗತ್ಯ ಹಾಗೂ ದೃಷ್ಟಿ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.
​ಕಾರ್ಯಕ್ರಮದಲ್ಲಿ ವೈದ್ಯಕೀಯ ಸಿಬ್ಬಂದಿ, ಸಾಮಾಜಿಕ ಕಾರ್ಯಕರ್ತರು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದು, ಶಿಬಿರದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಉಚಿತ ಆರೋಗ್ಯ ಸೇವೆ ಹಾಗೂ ಕನ್ನಡಕ ವಿತರಣೆಯಿಂದ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಿದ್ದು, ಇಂತಹ ಜನಪರ ಕಾರ್ಯಕ್ರಮಗಳು ಮುಂದುವರಿಯಲಿ ಎಂದು ಫಲಾನುಭವಿಗಳು ಆಶಿಸಿದರು.