ಸುದ್ದಿ ಕನ್ನಡ ವಾರ್ತೆ
ದಾಂಡೇಲಿ:ತಾಲೂಕಿನ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ದಾಂಡೇಲಿ-ಹಳಿಯಾಳ ರಸ್ತೆಯ ಅಜಗಾವ್ ಸಮೀಪ ಭಾನುವಾರ ತಡ ರಾತ್ರಿ ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ, ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಎರಡೂ ವಾಹನಗಳು ಜಖಂಗೊಂಡಿವೆ.
ದಾಂಡೇಲಿಯಿಂದ ಹಳಿಯಾಳ ಕಡೆಗೆ ತೆರಳುತ್ತಿದ್ದ ಯಡೋಗಾ ಗ್ರಾಮದ ಸ್ವಿಫ್ಟ್ ಕಾರು ಹಾಗೂ ಹಳಿಯಾಳದಿಂದ ದಾಂಡೇಲಿ ಕಡೆಗೆ ಬರುತ್ತಿದ್ದಗ ಗದಗ ಮೂಲದ ಕ್ವಾಲಿಸ್ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ದಾಂಡೇಲಿ ಗ್ರಾಮೀಣ ಠಾಣೆಯ ಪಿ ಎಸ್ ಐ ಶಿವಾನಂದ ನಾವದಗಿ ಹಾಗೂ ಪೊಲೀಸರು ಗಾಯಾಳುಗಳನ್ನು ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಒದಗಿಸಿದ್ದಾರೆ. ಘಟನಾ ಸ್ಥಳಕ್ಕೆ ಹಳಿಯಾಳ ಪಿ ಎಸ್ ಐ ಕೃಷ್ಣ ಗೌಡ ಅರಕೇರಿ ಭೇಟಿ ನೀಡಿದ್ದರು. ಈಗ ಎರಡು ಕಾರುಗಳು ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ಸುಪರ್ದಿಯಲ್ಲಿದೆ.
