ಸುದ್ದಿ ಕನ್ನಡ ವಾರ್ತೆ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಕ್ರಮದ ವಿರುದ್ಧ ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿದ್ದು ಅಗಸ್ಟ್ 13ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.

ಈ ಕುರಿತಂತೆ ಶುಕ್ರವಾರ ಬೆಳಿಗ್ಗೆ ನಡೆದ ಕನ್ನಡ ಒಕ್ಕೂಟದ ಸಭೆಯ ನಂತರ ಅಧ್ಯಕ್ಷ ವಾಟಾಳ್ ನಾಗರಾಜ್ ಕರ್ನಾಟಕ ಬಂದ್ ಕುರಿತಂತೆ ಅಧಿಕೃತವಾಗಿ ಘೋಷಿಸಿದರು.

ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಲ್ಲಿ ಈಗಾಗಲೇ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ನಡುವೆಯೇ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ನೀಡಿರುವುದು ಖಂಡನೀಯ. ಕರ್ನಾಟಕ ಕಳ್ಳ ಮಾರ್ಗದಲ್ಲಿ ತಮಿಳುನಾಡಿಗೆ ನೀರು ಹರಿಸಿದರೆ ಇಡೀ ಸರ್ಕಾರವೇ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ವಾಟಾಳ್ ನಾಗರಾಜ್ ಎಚ್ಚರಿಸಿದ್ದಾರೆ.

ಒಗ್ಗಟ್ಟಿನ ಹೋರಾಟದ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಕರ್ನಾಟಕ ರಾಜ್ಯದ್ಯಂತ ಬಂದ್ ಗೆ ಕರೆ ನೀಡಿದ್ದಾರೆ.