ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾದಿಂದ ಬೆಂಗಳೂರಿಗೆ ಹೋಗುತ್ತಿದ್ದ ಸೀಬರ್ಡ ಖಾಸಗಿ ಬಸ್ ಗುರುವಾರ ರಾತ್ರಿ ಕಾಣಕೋಣದ ಬಳಿ ಅಪಘಾತಕ್ಕೀಡಾದ ಘಟನೆ ನಡೆದಿದೆ. ಈ ರಸ್ತೆಯಲ್ಲಿ ಆಯಿಲ್ ಸೋರಿಕೆಯಾಗಿದ್ದರಿಂದ ಬಸ್ ಸ್ಕಿಡ್ ಆಗಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಒಬ್ಬ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು ಇನ್ನೂ ನಾಲ್ವರಿಗೆ ಸಣ್ಣಪುಟ್ಟ ಗಾಯವಾಗಿದೆ ಎನ್ನಲಾಗಿದೆ.
ಈ ಘಟನೆಯಿಂದಾಗಿ ಕಾಣಕೋಣ-ಮಡಗಾಂವ ಹೆದ್ದಾರಿಯಲ್ಲಿ ಕೆಲ ಸಮಯ ವಾಹನ ದಟ್ಟಣೆಯುಂಟಾಗಿತ್ತು. ಈ ಬಸ್ ಕಾಣಕೋಣ ಬಳಿಯ ಪಾಡಿ ತಲುಪುತ್ತಿದ್ದಂತೆಯೇ ರಸ್ತೆ ತಿರುವಿನಲ್ಲಿ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ ಎಂದು ಕುಂಕಳ್ಳಿ ಪಿಐ ಕಪಿಲ್ ನಾಯಕ್ ಮಾಹಿತಿ ನೀಡಿದ್ದಾರೆ.
