ಸುದ್ದಿ ಕನ್ನಡ ವಾರ್ತೆ
ದಾಂಡೇಲಿ : ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್ಐ ಯಾಗಿ ಕಳೆದ ಒಂದು ವರ್ಷದಿಂದ ಸೇವೆಯನ್ನು ಸಲ್ಲಿಸುತ್ತಿದ್ದ ಕಿರಣ್ ಪಾಟೀಲ್ ಅವರು ದಾಂಡೇಲಿ ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐ ಯಾಗಿ ಮಂಗಳವಾರ ಅಧಿಕಾರವನ್ನು ವಹಿಸಿಕೊಂಡರು.
ಇವರು ಈ ಹಿಂದೆ ಜೋಯಿಡಾ ತಾಲೂಕಿನ ರಾಮನಗರ ಠಾಣೆಯ ಪಿಎಸ್ಐಯಾಗಿ, ಆನಂತರ ದಾಂಡೇಲಿ ನಗರ ಠಾಣೆಯ ಪಿಎಸ್ಐ ಯಾಗಿ ಸೇವೆಯನ್ನು ಸಲ್ಲಿಸಿ, ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್ಐ ಯಾಗಿ ವರ್ಗಾವಣೆಗೊಂಡಿದ್ದರು. ಇದೀಗ ದಾಂಡೇಲಿ ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಅಧಿಕಾರವನ್ನು ವಹಿಸಿಕೊಂಡಿದ್ದಾರೆ.
ದಕ್ಷ ಹಾಗೂ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಕಿರಣ್ ಪಾಟೀಲ್ ಅವರು ಗಮನ ಸೆಳೆದಿದ್ದಾರೆ. ಬಡವರು ಮತ್ತು ಜನಸಾಮಾನ್ಯರ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿರುವ ಅಧಿಕಾರಿಯಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.