Banner Ad

ಸುದ್ದಿ ಕನ್ನಡ ವಾರ್ತೆ
ಅಳ್ನಾವರ: ಪಟ್ಟಣದ ಸಾಲುಮರದ ತಿಮ್ಮಕ್ಕ ಉದ್ಯಾನವನದ ಸಮೀಪದ ಮರಾಠಾ ಸಮಾಜದ ಸ್ಮಶಾನದ ತಡೆಗೋಡೆ ಬಳಿ ಭಾನುವಾರ ಬೆಳಿಗ್ಗೆ ಬೃಹತ್ ಮರವೊಂದರ ಕೊಂಬೆ ಮೇನ್‌ಲೈನ್ ಮೇಲೆ ಬಿದ್ದ ಪರಿಣಾಮ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಸುಮಾರು ಮೂರು ಗಂಟೆಗಳ ಕಾಲ ಪಟ್ಟಣದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಯಿತು.

ಭಾನುವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಬೃಹತ್ ಮರದ ಕೊಂಬೆ ವಿದ್ಯುತ್ ಮಾರ್ಗದ ಮೇಲೆ ಬಿದ್ದ ಪರಿಣಾಮ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದವು. ಘಟನೆ ಸಂಭವಿಸಿದ ತಕ್ಷಣವೇ ವಿದ್ಯುತ್ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ದುರಸ್ತಿ ಕಾರ್ಯ ಕೈಗೊಂಡರು.

Banner Ad

ಶೀಘ್ರವಾಗಿ ದುರಸ್ತಿ ಕಾರ್ಯ ಪೂರ್ಣಗೊಳಿಸಿ ವಿದ್ಯುತ್ ಪೂರೈಕೆ ಪುನಃಸ್ಥಾಪಿಸಲು ಕ್ರಮ ಕೈಗೊಳ್ಳಲಾಯಿತು. ಮಧ್ಯಾಹ್ನ 1 ಗಂಟೆ ವೇಳೆಗೆ ಎಂದಿನಂತೆ ವಿದ್ಯುತ್ ಸರಬರಾಜು ಆರಂಭವಾಯಿತು ಎಂದು ಸೆಕ್ಷನ್ ಆಫೀಸರ್ ಕೆ.ಎಲ್. ನಾಯಕ್ ತಿಳಿಸಿದ್ದಾರೆ.

Banner Ad