Banner Ad

ಸುದ್ದಿ ಕನ್ನಡ ವಾರ್ತೆ

ಜೋಯಿಡಾ: ತಾಲೂಕಿನ ಅವುರ್ಲಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಅವುರ್ಲಿ-ದಾಬೆ ರಸ್ತೆ ಸುಮಾರು 1 ಕಿ.ಮೀ. ಉದ್ದದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

Banner Ad

​ಈ ರಸ್ತೆಯ ವ್ಯಾಪ್ತಿಯಲ್ಲಿ ಅಂಗನವಾಡಿ, ಹಿರಿಯ ಪ್ರಾಥಮಿಕ ಶಾಲೆ,ಸೋಮೇಶ್ವರ ದೇವಸ್ಥಾನ ಹಾಗೂ ಗ್ಯಾಸ್ ಸಿಲಿಂಡರ,ಶಾಲೆಯ ರೇಷನ್ ಸೇರಿದಂತೆ ಇನ್ನಿತರ ವಾಹನಗಳಿಗೆ ಅವುರ್ಲಿ-ಗುಂದ ಭಾಗಕ್ಕೆ ಸಂಪರ್ಕ ಕಲ್ಪಿಸುವ ಬೈಪಾಸ್ ರಸ್ತೆಯಾಗಿದ್ದು, ಪ್ರತಿದಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ಅದೇ ರೀತಿಯಾಗಿ ನಂದಿಗದ್ದೆ ಗ್ರಾಮ ಪಂಚಾಯತ ವ್ಯಾಪ್ತಿಯ ಆಸ್ಪತ್ರೆ,ಅಂಚೆ ಕಚೇರಿ, ಬ್ಯಾಂಕ್,ರೇಷನ್ ಅಂಗಡಿ, ಸೇವಾ ಸಹಕಾರಿ ಸಂಘದ ವ್ಯವಹಾರ ಸೇರಿದಂತೆ ದಿನನಿತ್ಯದ ಇನ್ನಿತರ ಸೇವೆಗೆ ರಸ್ತೆ ಹದಗೆಟ್ಟಿರುವುದರಿಂದ ವಾಹನಗಳ ಮೆಂಟೆನೆನ್ಸ ಖರ್ಚು, ವಾಹನ ಸಂಚಾರಕ್ಕೂ ಸಮಸ್ಯೆಯಾಗಿದ್ದು, ಹಲವು ವರ್ಷಗಳಿಂದ ರಸ್ತೆಯ ದುರಾವಸ್ಥೆ ಮುಂದುವರಿದಿದ್ದರೂ ಸಮಸ್ಯೆಗೆ ವರ್ಷಕ್ಕೊಮ್ಮೆ ಗ್ರಾಮ ಪಂಚಾಯತ ವತಿಯಿಂದ ತಾತ್ಕಾಲಿಕ ರಿಪೇರಿ ನಡೆದರೂ ಶಾಶ್ವತ ಪರಿಹಾರ ದೊರೆತಿಲ್ಲ ಎಂಬುದು ಗ್ರಾಮಸ್ಥರ ಅನಿಸಿಕೆ.

​ವಾರ್ಡ್ ಸಭೆ, ಗ್ರಾಮ ಸಭೆ, ಜನಸಂಪರ್ಕ ಸಭೆ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ರಸ್ತೆ ಸಮಸ್ಯೆಯನ್ನು ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಕಳೆದ ಹಲವಾರು ವರ್ಷಗಳಿಂದ ರಸ್ತೆ ದುರಸ್ತಿಗಾಗಿ ಮನವಿ ಸಲ್ಲಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಆದರೆ ಮಳೆ ಹಾಗೂ ನಿರಂತರ ವಾಹನ ಸಂಚಾರದಿಂದ ಮತ್ತೆ ರಸ್ತೆ ಹಾಳಾಗಿದೆ.

​ಇದೀಗ ರಸ್ತೆಯ ಸ್ಥಿತಿ ಮತ್ತಷ್ಟು ಹದಗೆಟ್ಟಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ರಸ್ತೆಯನ್ನು ಕೇವಲ ತಾತ್ಕಾಲಿಕವಾಗಿ ದುರಸ್ತಿ ಮಾಡುವ ಬದಲು ಸಿಮೆಂಟ್ ಅಥವಾ ಡಾಂಬರ್ ರಸ್ತೆಯಾಗಿ ಅಭಿವೃದ್ಧಿಪಡಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

​ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸುರಕ್ಷಿತ ಸಂಚಾರದ ದೃಷ್ಟಿಯಿಂದ ಈ ರಸ್ತೆಯ ಸಮಸ್ಯೆಗೆ ಇನ್ನಾದರೂ ಆದ್ಯತೆ ನೀಡಿ, ಕಾಮಗಾರಿ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಮನವಿಯಾಗಿದೆ.

Banner Ad