ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ಅಸು ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಿಂದೋಳಿ ಶಾಲೆಯ ಬಾಲಕಿಯರು ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತಾಲೂಕಿನ ಗಣೇಶಗುಡಿಯಲ್ಲಿ ನಡೆದ ಬಾಲ್ ಬ್ಯಾಡ್ಮಿಂಟನ್ ವಿಭಾಗದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಬಾಲಕಿಯರ ಈ ಸಾಧನೆಗೆ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿಗಳು,ಅಧಿಕಾರಿ ವರ್ಗದವರು, ದೈಹಿಕ ಶಿಕ್ಷಣ ಪರಿವೀಕ್ಷಕರು,ದೈಹಿಕ ಶಿಕ್ಷಣ ಶಿಕ್ಷಕ ವೃಂದದವರು,ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಗುರುನಾಥ ಮಾಜಾಳಕರ, ಉಪಾಧ್ಯಕ್ಷರಾದ ತನುಜಾ ಮಸೂರಕರ,ಸರ್ವ ಸದಸ್ಯರು,ಪಾಲಕರ-ಪೋಷಕರು ಊರಿನ ಗ್ರಾಮಸ್ಥರು, ಶಾಲೆಯ ಮುಖ್ಯ ಶಿಕ್ಷಕರಾದ ಅನಿಲ ರಾಠೋಡ,ಸಹ ಶಿಕ್ಷಕರಾದ ಆನಂದ ಪಿ,ವಿದ್ಯಾ ಮೇಡಂ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ. ಬಾಲಕಿಯರಿಗೆ ಶಾಲೆಯ ಮುಖ್ಯ ಶಿಕ್ಷಕರಾದ ಅನಿಲ ರಾಠೋಡ,ಸಹ ಶಿಕ್ಷಕರಾದ ಆನಂದ ಪಿ,ವಿದ್ಯಾ ಮೇಡಂ,ಹಳೆಯ ವಿದ್ಯಾರ್ಥಿಗಳು ಸಹಕಾರ,ಪ್ರೋತ್ಸಾಹ ಮಾರ್ಗದರ್ಶನ ಮಾಡಿರುತ್ತಾರೆ.
