ಸುದ್ದಿ ಕನ್ನಡ ವಾರ್ತೆ
​ಜೋಯಿಡಾ:ತಾಲೂಕಿನ ಗಣೇಶಗುಡಿಯಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ 14 ವರ್ಷದೊಳಗಿನವರ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಜೋಯಿಡಾದ ಹೋಲಿ ಫ್ಯಾಮಿಲಿ ಶಾಲೆಯ ಆರವ್ ಕುಶಾಲಿಕರ ಮತ್ತು ಧನುಷ್ ಜೋಡಿ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.

​ಕೆಪಿಸಿ ಗಣೇಶಗುಡಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು.
​ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಹೋಲಿ ಫ್ಯಾಮಿಲಿ ಶಾಲೆಯ ಆರವ್ ಕುಶಾಲಿಕರ್ ಮತ್ತು ಧನುಷ್ ಅವರು ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಶಿಕ್ಷಕರು, ಪೋಷಕರು ಹಾಗೂ ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.