ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ಕುಂಬಾರವಾಡದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅಸು ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಿಂದೋಳಿ
ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಕ್ರೀಡಾ ಸಾಧನೆಗಳು,ಕ್ರೀಡಾ ಸ್ಪರ್ಧೆಗಳು:ಬಾಲಕರ 4×100 ಮೀಟರ್ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅದಲ್ಲದೇ 600 ಮೀಟರ್ ಓಟ ಬಾಲಕಿಯರ ವಿಭಾಗ 2 ನೇ ಸ್ಥಾನ ಸಂಚಿತಾ ಮಿರಾಶಿ. ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬಾಲಕಿಯರು ಪ್ರಥಮ ಸ್ಥಾನ. ವಾಲಿಬಾಲ್ ಬಾಲಕಿಯರು ಪ್ರಥಮ ಸ್ಥಾನ. ವಾಲಿಬಾಲ್ ಬಾಲಕರು ಪ್ರಥಮ ಸ್ಥಾನ.
ಸಾಧನೆ ಮಾಡಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ತಾಲೂಕಿನ ಶಿಕ್ಷಣ ಇಲಾಖೆಯ ಅಧಿಕಾರಿ ವರ್ಗದವರು,ಶಿಕ್ಷಕ ವೃಂದದವರು,ಸಿ.ಆರ್.ಪಿ, ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಗುರುನಾಥ ಮಾಜಾಳಕರ ,ಉಪಾಧ್ಯಕ್ಷೆ ತನುಜಾ ಮಸೂರಕರ,ಸರ್ವ ಸದಸ್ಯರು, ಪಾಲಕ-ಪೋಷಕರು,ಗಣ್ಯರು ಶಾಲೆಯ ಮುಖ್ಯ ಶಿಕ್ಷಕರು,ಸಹ ಶಿಕ್ಷಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯ ಶಿಕ್ಷಕರಾದ ಅನಿಲ ರಾಠೋಡ,ಸಹ ಶಿಕ್ಷಕರಾದ ಆನಂದ ಪಿ,ಸಹ ಶಿಕ್ಷಕಿಯಾದ ವಿದ್ಯಾ ಮೇಡಂ,ಹಳೆಯ ವಿದ್ಯಾರ್ಥಿಗಳು ಸಹಕಾರ, ಪ್ರೋತ್ಸಾಹ,ಮಾರ್ಗದರ್ಶನ ಮಾಡಿರುತ್ತಾರೆ.