ಸುದ್ದಿ ಕನ್ನಡ ವಾರ್ತೆ
​ಜೋಯಿಡಾ:ತಾಲೂಕಿನ ಕುಂಬಾರವಾಡದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದ 14 ವರ್ಷ ವಯೋಮಿತಿಯೊಳಗಿನ ಕಬಡ್ಡಿ ಸ್ಪರ್ಧೆಯಲ್ಲಿ ರಾಮನಗರದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

​ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಪ್ರಾಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿ, ಜಿಲ್ಲಾ ಮಟ್ಟದಲ್ಲೂ ಉತ್ತಮ ಪ್ರದರ್ಶನ ನೀಡಿ ಶಾಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.
​ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಶಾಲೆಯ ಸಹಪಾಠಿಗಳು ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.