ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ತಾಲೂಕಿನ ಕುಂಬಾರವಾಡದಲ್ಲಿ ನಡೆದ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಉಳವಿ ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣಕೋಳ ಶಾಲೆಯ ಬಾಲಕಿಯರು ಗುಂಪು ಆಟವಾದ ಖೋ-ಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

 

ವಿದ್ಯಾರ್ಥಿಗಳ ಈ ಸಾಧನೆಗೆ ತಾಲೂಕಿನ ಶಿಕ್ಷಣ ಇಲಾಖೆಯ ಅಧಿಕಾರಿ ವರ್ಗದವರು,ಶಿಕ್ಷಕ ವೃಂದದವರು,ಸಿ.ಆರ್.ಪಿ,ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು,ಸರ್ವ ಸದಸ್ಯರು, ಪಾಲಕ-ಪೋಷಕರು,ಗಣ್ಯರು,ಮುಖ್ಯ ಶಿಕ್ಷಕರು,ಸಹ ಶಿಕ್ಷಕರು,ಹಳೆಯ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.