ಸುದ್ಧಿಕನ್ನಡ ವಾರ್ತೆ
ಹುಬ್ಬಳ್ಳಿ: ಜೆಜಿಎಂಎಂ ಮೆಡಿಕಲ್ ಕಾಲೇಜು ಹಾಗೂ ಸಂಸೋಧನಾ ಕೇಂದ್ರದ ಉಧ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಶುಕ್ರವಾರ ಹುಬ್ಬಳ್ಳಿಗೆ ಆಗಮಿಸಿದ್ದ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ರವರು ಅನಾರೋಗ್ಯದ ಹಿನ್ನೆಲೆಯಲ್ಲಿ ಶನಿವಾರದ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.
ಹುಬ್ಬಳ್ಳಿಯ ಗಬ್ಬೂರು ಸಮೀಪದ ಕಾರ್ಯಕ್ರಮದ ಸ್ಥಳದಲ್ಲಿ ಬೆಳಿಗ್ಗೆ 11 ಗಂಟೆಗೆ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ತೆಯನ್ನು ಉಧ್ಘಾಟಿಸಬೇಕಿತ್ತು. ಕಾರ್ಯಕ್ರಮದ ಸಿದ್ಧತೆಯೂ ಪೂರ್ಣಗೊಂಡಿತ್ತು. ಅಗತ್ಯ ಭಧ್ರತಾ ಕ್ರಮವನ್ನುನ ಕ್ಯಗೊಳ್ಳಲಾಗಿತ್ತು. ಆದರೆ ಶನಿವಾರ ಬೆಳಿಗ್ಗೆ ಅಮಿತ್ ಶಾ ರವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎನ್ನಲಾಗಿದೆ.
ಅಮಿತ್ ಶಾ ರವರಿಗೆ ವೈದ್ಯರು ಕೆಲ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
