ಸುದ್ದಿ ಕನ್ನಡ ವಾರ್ತೆ
ಜೋಯಿಡಾ,,,, ಉತ್ತರ ಕನ್ನಡ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಕುಸ್ತಿ ಪಂದ್ಯಾವಳಿಯಲ್ಲಿ ಜೋಯಿಡಾ ಬಿ.ಜಿ.ವಿ.ಎಸ್.ಕಾಲೇಜಿನ ಕಾವ್ಯಾ ದಾನವೇನವರ ಫ್ರೀಸ್ಟೈಲ್ ವಿಭಾಗದಲ್ಲಿ ಗೆದ್ದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಹಳಿಯಾಳದ ಕುಸ್ತಿ ಅಕಾಡಾದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಕುಸ್ತಿ ಪಂದ್ಯಾವಳಿಯಲ್ಲಿ ಜೋಯಿಡಾ ಬಿಜಿವಿಎಸ್ ಕಾಲೇಜಿನ ವಿದ್ಯಾರ್ಥಿನಿ,ಕಾವ್ಯ ದಾನವೇನವರ ಫ್ರೀಸ್ಟೈಲ್ ವಿಭಾಗದಲ್ಲಿ ಬಂಗಾರದ ಪದಕ ಪಡೆದಿದ್ದಾಳೆ.
ಕಾವ್ಯಾದಾನವೇನವರ ಕಳೆದ ಬಾರಿಯೂ ಜಿಲ್ಲಾ ಮಟ್ಟದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಹರಿಯಾಣಾದ ಪಾನಿಪತ್ ನಲ್ಲಿ ನಡೆದ ರಾಷ್ಟಮಟ್ಟದ ಕುಸ್ತಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಿ ತೃತೀಯ ಸ್ಥಾನ ಪಡೆದು ಕಂಚಿನ ಪದಕಕ್ಕೆ ಭಾಜನಳಾಗಿದ್ದಳು.
ಇವಳು ಸಾಧನೆಗೆ ಬಾಪೂಜಿ ಗ್ರಾಮೀಣ ವಿಕಾಸ ಸಮಿತಿ ಅಧ್ಯಕ್ಷರು ಶ್ರೀಮತಿ ವನಿತಾ ಪ್ರಭಾಕರ ರಾಣೆ, ಉಪಾಧ್ಯಕ್ಷ ಉಲ್ಲಾಸ ನಾಯ್ಕ, ಕಾರ್ಯದರ್ಶಿ ಮಂಜುನಾಥ ಪವಾರ್, ಹಾಗೂ ಕಿಶೋರ ರಾಣೆ. ಹಾಗೂ ಸದಸ್ಯರು ಮತ್ತು ಸ್ಥಳೀಯ ಆಡಳಿತ ಮಂಡಳಿ ಅಧ್ಯಕ್ಷ ಮನೋಹರ ದೇಸಾಯಿ ಹಾಗೂ ಸದಸ್ಯರು, ಕಾಲೇಜಿನ ಪ್ರಾಚಾರ್ಯರು ಮಂಜುನಾಥ ಶೆಟ್ಟಿ,ದೈಹಿಕ ಶಿಕ್ಷಣ ಉಪನ್ಯಾಸಕ ಪಾಂಡುರಂಗ ಪಟಗಾರ, ಹಾಗೂ ಕಾಲೇಜಿನ ಎಲ್ಲಾ ಸಿಬ್ಬಂದಿಗಳು ಶುಭವನ್ನು ಹಾರೈಸಿರುತ್ತಾರೆ.
ಈ ಬಾರಿ ತರಬೇತುದಾರ ತುಕಾರಾಮ ರವರ ಮಾರ್ಗದರ್ಶನದಲ್ಲಿ ವಿಶೇಷ ತರಬೇತಿ ಪಡೆದ ಕಾವ್ಯಾ ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ರಾಷ್ಟಮಟ್ಟದಲ್ಲಿ ಬಂಗಾರದ ಪದಕ ಗಿಟ್ಟಿಸಿಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇವಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಅಲ್ಲಿಯೂ ಉತ್ತಮ ಸಾಧನೆ ಮಾಡಿ ರಾಜ್ಯಕ್ಕೆ ಕೀರ್ತಿ ಬರುವಂತಾಗಲಿ ಎಂದು ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಹಾರೈಸಿದೆ.
