ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ:ತಾಲೂಕಿನ ಹಳಬೈಲ್ ಶಾಖಾ ವ್ಯಾಪ್ತಿಯ ಕಣ್ಣೇಗೇರಿ ಗ್ರಾಮದ ಹಳಿಯಾಳ ಕ್ರಾಸ್ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ವನ್ಯಪ್ರಾಣಿ ಬೇಟೆಯಾಡಿ ಮಾಂಸ ದಾಸ್ತಾನು ಮಾಡಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೋಮವಾರ ಸಂಜೆ ಬಂಧಿಸಿದ್ದಾರೆ.
ಹಳಿಯಾಳ ಕ್ರಾಸ್ನ ಇನಾಸ್ ಬಸ್ತ್ಯಾನ್ ಸಿದ್ದಿ ಹಾಗೂ ಅವರ ಪುತ್ರ ಪ್ರಕಾಶ್ ಇನಾಸ್ ಸಿದ್ದಿ ಬಂಧಿತ ಆರೋಪಿಗಳು.
ಖಚಿತ ಮಾಹಿತಿ ಆಧರಿಸಿ ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು,ಮೃತಪಟ್ಟ ಎರಡು ಗಂಡು ಉಡಗಳು ಹಾಗೂ ಬೇಟೆಗೆ ಬಳಸಿದ್ದ ಎರಡು ಕತ್ತಿ ಮತ್ತು ಒಂದು ಕೊಡಲಿಯನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಅಬ್ದುಲ್ ಅಜೀಜ್ ಶೇಖ್ ಅವರ ನೇತೃತ್ವ ಹಾಗೂ ವಲಯ ಅರಣ್ಯಾಧಿಕಾರಿ ಮಂಜುನಾಥ ಎಚ್. ನಾಯ್ಕ ಅವರ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ.
