ಸುದ್ದಿ ಕನ್ನಡ ವಾರ್ತೆ
ಅಂಕೋಲಾ: KSRTC ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 25ಕ್ಕೂ ಹೆಚ್ಚು ಜನ ಗಾಯಗೊಂಡು ಎರಡು ವರ್ಷದ ಮಗು ಸಾವನ್ನಪ್ಪಿದ ಘಟನೆ ಗುರುವಾರ ಸಂಭವಿಸಿದೆ.
ಈ ಘಟನೆ ಅಂಕೋಲಾ ತಾಲೂಕಿನ ಬೆಳಸೆ ಗ್ರಾಮದ ಹಂದಿ ಗದ್ದೆ ಪ್ರದೇಶದಲ್ಲಿ ಸಂಭವಿಸಿದೆ.
ಕುಮಟಾದಿಂದ ಅಂಕೋಲಾ ಕಡೆಗೆ ಬಸ್ ಬರುತ್ತಿತ್ತು, ಈ ಭೀಕರ ಅಪಘಾತದಲ್ಲಿ ಬಸ್ ಮುಂಭಾಗ ಸಂಪೂರ್ಣ ನುಚ್ಚುಗುಜ್ಜಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಕಾರವಾರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
