ಸುದ್ದಿ ಕನ್ನಡ ವಾರ್ತೆ
ಜೋಯಿಡಾ ತಾಲೂಕಿನ ಅಖೆತಿ ಗ್ರಾಮ ಪಂಚಾಯತ್ ದ ಮೇಡಾ ಗ್ರಾಮ ದಲ್ಲಿ ಗ್ರಾಮೀಣ ಮಹಿಳೆಯರಲ್ಲಿ ಕೌಶಲ್ಯಾಭಿವೃದ್ಧಿ, ಸ್ವಾವಲಂಬನೆ ಹಾಗೂ ಸ್ವ-ಉದ್ಯೋಗವನ್ನು ಉತ್ತೇಜಿಸುವ ಉದ್ದೇಶದಿಂದ ಕೆನರಾ ಬ್ಯಾಂಕ್ ದೇಶಪಾಂಡೆ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (RSETI), ಹಳಿಯಾಳ ಹಾಗೂ JSW ಫೌಂಡೇಶನ್ ಇವರ ಸಹಯೋಗದಲ್ಲಿ ತರಬೇತಿ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಬಸವಂತ್ ಗೌಡ ಪಾಟೀಲ ಹಾಗೂ ಮೇಡಾ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಸುಹಾಸ್ ದೇಸಾಯಿ ಭಾಗವಹಿಸಿ, ತರಬೇತಿಯ ಮಹತ್ವದ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಅಶ್ವಿನಿ ದೇಸಾಯಿ, ಅಂಗನವಾಡಿ ಶಿಕ್ಷಕಿ, ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆನರಾ ಬ್ಯಾಂಕ್ ದೇಶಪಾಂಡೆ RSETIಯ ಯೋಜನಾಧಿಕಾರಿ ಸಂಜೀವ್ ವರ್ಮಾ ಜೋಶಿ ವಹಿಸಿದ್ದರು. ಸಂಸ್ಥೆಯ ವತಿಯಿಂದ ಮನೋಹರ ಚೌರಿ ತರಬೇತಿ ಕಾರ್ಯಕ್ರಮದ ಕುರಿತು ಹೇಳಿದರು . ಅಕ್ಷತಾ ದೇಸಾಯಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ತರಬೇತಿದಾರರಿಗೆ ವಿಷಯಾಧಾರಿತ ಹಾಗೂ ಪ್ರಾಯೋಗಿಕ ತರಬೇತಿ ನೀಡುತ್ತಾ,ಮೇಡಾ ಗ್ರಾಮದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಬಸವಂತ್ ಗೌಡ ಪಾಟೀಲ ಹಾಗೂ ಮೇಡಾ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಸುಹಾಸ್ ದೇಸಾಯಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ತರಬೇತಿಯ ಮಹತ್ವದ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಅಶ್ವಿನಿ ದೇಸಾಯಿ, ಅಂಗನವಾಡಿ ಶಿಕ್ಷಕಿ, ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆನರಾ ಬ್ಯಾಂಕ್ ದೇಶಪಾಂಡೆ RSETIಯ ಯೋಜನಾಧಿಕಾರಿ ಸಂಜೀವ್ ವರ್ಮಾ ಜೋಶಿ ವಹಿಸಿದ್ದರು. ಸಂಸ್ಥೆಯ ವತಿಯಿಂದ ಮನೋಹರ ಚೌರಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದರು. ಅಕ್ಷತಾ ದೇಸಾಯಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ತರಬೇತಿದಾರರಿಗೆ ವಿಷಯಾಧಾರಿತ ಹಾಗೂ ಪ್ರಾಯೋಗಿಕ ತರಬೇತಿ ನೀಡಿದರು.
ಗ್ರಾಮೀಣ ಭಾಗದ ಮಹಿಳೆಯರು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳು ಹಾಗೂ ತಮ್ಮ ಕೌಶಲ್ಯವನ್ನು ಬಳಸಿಕೊಂಡು ಸ್ವಂತ ಉದ್ಯಮ ಆರಂಭಿಸಲು ಅಗತ್ಯವಾದ ಜ್ಞಾನ ಮತ್ತು ಪ್ರಾಯೋಗಿಕ ಕೌಶಲ್ಯಗಳನ್ನು ಬೆಳೆಸುವುದು ತರಬೇತಿಯ ಪ್ರಮುಖ ಉದ್ದೇಶವಾಗಿದೆ. ತರಬೇತಿಯ ನಂತರ ಭಾಗವಹಿಸುವವರು ಸ್ವ-ಉದ್ಯೋಗ ಕೈಗೊಳ್ಳುವ ಮೂಲಕ ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಕುಟುಂಬದ ಆರ್ಥಿಕ ಸ್ಥಿತಿಗೆ ಕೊಡುಗೆ ನೀಡುವ ಅವಕಾಶವನ್ನು ಪಡೆಯಲಿದ್ದಾರೆ.
ಗ್ರಾಮೀಣ ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುವ ನಿಟ್ಟಿನಲ್ಲಿ JSW ಫೌಂಡೇಶನ್ ಹಾಗೂ ಕೆನರಾ ಬ್ಯಾಂಕ್ ದೇಶಪಾಂಡೆ RSETI ಕೈಗೊಂಡಿರುವ ಇಂತಹ ಕೌಶಲ್ಯಾಧಾರಿತ ತರಬೇತಿ ಕಾರ್ಯಕ್ರಮಗಳು ಮಹತ್ವದ ಹೆಜ್ಜೆಯಾಗಿವೆ.ಗ್ರಾಮೀಣ ಭಾಗದ ಮಹಿಳೆಯರು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲ, ಹಾಗೂ ತಮ್ಮ ಕೌಶಲ್ಯವನ್ನು ಬಳಸಿಕೊಂಡು ಸ್ವಂತ ಉದ್ಯಮ ಆರಂಭಿಸಲು ಅಗತ್ಯವಾದ ಜ್ಞಾನ ಮತ್ತು ಪ್ರಾಯೋಗಿಕ ಕೌಶಲ್ಯಗಳನ್ನು ಬೆಳೆಸುವುದು ತರಬೇತಿಯ ಪ್ರಮುಖ ಉದ್ದೇಶವಾಗಿದೆ. ತರಬೇತಿಯ ನಂತರ ಭಾಗವಹಿಸುವವರು ಸ್ವ-ಉದ್ಯೋಗ ಕೈಗೊಳ್ಳುವ ಮೂಲಕ ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಕುಟುಂಬದ ಆರ್ಥಿಕ ಸ್ಥಿತಿಗೆ ಕೊಡುಗೆ ನೀಡುವ ಅವಕಾಶವನ್ನು ಪಡೆಯಲಿದ್ದಾರೆ,ಎಂದರು.
ಗ್ರಾಮೀಣ ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುವ ನಿಟ್ಟಿನಲ್ಲಿ JSW ಫೌಂಡೇಶನ್ ಹಾಗೂ ಕೆನರಾ ಬ್ಯಾಂಕ್ ದೇಶಪಾಂಡೆ RSETI ಕೈಗೊಂಡಿರುವ ಇಂತಹ ಕೌಶಲ್ಯಾಧಾರಿತ ತರಬೇತಿ ಕಾರ್ಯಕ್ರಮಗಳು ಮಹತ್ವದ ಹೆಜ್ಜೆಯಾಗಿವೆ.ಎಂದು ತಿಳಿಸಲಾಯಿತು
