ಸುದ್ದಿ ಕನ್ನಡ ವಾರ್ತೆ
ಶಿರಸಿ: ವೇಗವಾಗಿ ಬರುತ್ತಿದ್ದ ಕಾರು ಶಿರಸಿ ಕುಮುಟಾ ರಸ್ತೆಯ ಸಂಪಕಂಡ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಘಟನೆಯಲ್ಲಿ ಚಾಲಕ ಗಂಭೀರ ಗಾಯಗೊಂಡಿದ್ದು ಕಾರಿನಲ್ಲಿದ್ದ ಇತರ ಪ್ರಾಣಿಕರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾರಿನಲ್ಲಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು, ಉತ್ತರ ಕನ್ನಡದ ಕುಮಟಾ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ವೇಳೆ ಚಂಪಕಂಡ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಕಾರು ಸಂಪೂರ್ಣವಾಗಿ ಜಖಂ ಗೊಂಡಿದೆ.
ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
