ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ಅಸು ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಿಂದೋಳಿ ಶಾಲೆಯಲ್ಲಿ ಸಡಗರ ಸಂಭ್ರಮದಿಂದ ರಾಷ್ಟ್ರ ಪಿತ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ಪ್ರಾರ್ಥನೆ,ಸ್ವಾಗತ ನಡೆಯಿತು. ನಂತರ ವಿದ್ಯಾರ್ಥಿಗಳು,ಶಿಕ್ಷಕರು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲೆಯ ಸಹ ಶಿಕ್ಷಕಿಯಾದ ವಿದ್ಯಾ ಮೇಡಂರವರು ಮಹಾತ್ಮ ಗಾಂಧೀಜಿಯವರು ಭಾರತದ ಸ್ವಾತಂತ್ರ್ಯ ಹೋರಾಟದ ಪ್ರಮುಖ ನಾಯಕರು ಮತ್ತು ನಮ್ಮ ದೇಶದ ರಾಷ್ಟ್ರಪಿತ ಎಂದು ಕರೆಯಲ್ಪಡುತ್ತಾರೆ.
ಮೋಹನದಾಸ ಕರಮಚಂದ ಗಾಂಧಿಯವರು ಅಕ್ಟೋಬರ್ 2, 1869.
ಗುಜರಾತಿನ ಪೋರಬಂದರ್.
ಕರಮಚಂದ ಗಾಂಧಿ ಹಾಗೂ ಪುತಲೀಬಾಯಿಯವರ ಮಗನಾಗಿ ಜನಿಸಿದರು.ವಿದ್ಯಾಭ್ಯಾಸ ಪ್ರಾಥಮಿಕ ಶಿಕ್ಷಣವನ್ನು ಪೋರಬಂದರ್ ಮತ್ತು ರಾಜಕೋಟನಲ್ಲಿ ಮುಗಿಸಿದರು.ಕಾನೂನು ಅಧ್ಯಯನಕ್ಕಾಗಿ ಲಂಡನ್‌ಗೆ ತೆರಳಿ ಬ್ಯಾರಿಸ್ಟರ್ ಪದವಿ ಪಡೆದರು.
ಅಹಿಂಸೆ ಮತ್ತು ಸತ್ಯಾಗ್ರಹ ಗಾಂಧೀಜಿಯವರ ಮುಖ್ಯ ಅಸ್ತ್ರಗಳಾಗಿದ್ದವು. ಬ್ರಿಟಿಷರ ವಿರುದ್ಧ ಶಾಂತಿಯುತವಾಗಿ ಹೋರಾಡಲು ಇವುಗಳನ್ನು ಬಳಸಿದರು.ಗಾಂಧೀಜಿಯವರು ಸತ್ಯ ಹಾಗೂ ಅಹಿಂಸೆಯನ್ನು ತಮ್ಮ ಜೀವನದ ಮುಖ್ಯ ತತ್ವಗಳನ್ನಾಗಿ ಸ್ವೀಕರಿಸಿದ್ದರು.ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ‘ಸತ್ಯಾಗ್ರಹ’ ಎಂಬ ಶಾಂತಿಯುತ ಪ್ರತಿಭಟನಾ ಮಾರ್ಗವನ್ನು ಬಳಸಿದರು.ಅಸಹಕಾರ ಚಳವಳಿ, ಉಪ್ಪಿನ ಸತ್ಯಾಗ್ರಹ (ದಂಡಿ ಯಾತ್ರೆ) ಮತ್ತು ಭಾರತ ಬಿಟ್ಟು ತೊಲಗಿ ಚಳವಳಿಗಳನ್ನು ಮುನ್ನಡೆಸಿದರು.
ಸ್ವದೇಶಿ ವಸ್ತುಗಳ ಬಳಕೆ ಮತ್ತು ಸ್ವಾವಲಂಬನೆಗೆ ಹೆಚ್ಚಿನ ಒತ್ತು ನೀಡಿದರು.ಗಾಂಧೀಜಿಯವರು ಸತ್ಯ ಹಾಗೂ ಅಹಿಂಸೆಯನ್ನು ತಮ್ಮ ಜೀವನದ ಮುಖ್ಯ ತತ್ವಗಳನ್ನಾಗಿ ಸ್ವೀಕರಿಸಿದ್ದರು. ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ‘ಸತ್ಯಾಗ್ರಹ’ ಎಂಬ ಶಾಂತಿಯುತ ಪ್ರತಿಭಟನಾ ಮಾರ್ಗವನ್ನು ಬಳಸಿದರು.ಅಸಹಕಾರ ಚಳವಳಿ, ಉಪ್ಪಿನ ಸತ್ಯಾಗ್ರಹ (ದಂಡಿ ಯಾತ್ರೆ) ಮತ್ತು ಭಾರತ ಬಿಟ್ಟು ತೊಲಗಿ ಚಳವಳಿಗಳನ್ನು ಮುನ್ನಡೆಸಿದರು.
ಸ್ವದೇಶಿ ವಸ್ತುಗಳ ಬಳಕೆ ಮತ್ತು ಸ್ವಾವಲಂಬನೆಗೆ ಹೆಚ್ಚಿನ ಒತ್ತು ನೀಡಿದರು ಎಂದು ಹೇಳಿದರು. ಶಾಲೆಯ ಮುಖ್ಯ ಶಿಕ್ಷಕರಾದ ಅನಿಲ ರಾಠೋಡರವರು ಮಾತನಾಡಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸ್ವತಂತ್ರ ಭಾರತದ ಎರಡನೇ ಪ್ರಧಾನ ಮಂತ್ರಿ ಹಾಗೂ ದೇಶದ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಾಮಾಣಿಕ ನಾಯಕರಲ್ಲಿ ಒಬ್ಬರಾಗಿದ್ದಾರೆ. ಅವರು ತಮ್ಮ ಸರಳತೆ, ದೇಶಭಕ್ತಿ ಮತ್ತು ಧೀಮಂತ ನಾಯಕತ್ವಕ್ಕೆ ಇಡೀ ದೇಶದಲ್ಲೇ ಹೆಸರಾಗಿದ್ದಾರೆ. 1965 ರ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ದೇಶವನ್ನು ಯಶಸ್ವಿಯಾಗಿ ಮುನ್ನಡೆಸಿದ ಅವರು ನೀಡಿದ “ಜೈ ಜವಾನ್, ಜೈ ಕಿಸಾನ್” ಘೋಷಣೆಯು ಇಂದಿಗೂ ಭಾರತೀಯರ ಹೃದಯದಲ್ಲಿ ಅಮರವಾಗಿದೆ.ಅಕ್ಟೋಬರ್ 2, 1904 ರಂದು ಉತ್ತರ ಪ್ರದೇಶದ ಮುಘಲ್‌ಸರಾಯ್‌ನಲ್ಲಿ ಜನಿಸಿದರು.ಮಹಾತ್ಮ ಗಾಂಧೀಜಿಯವರ ಜನ್ಮದಿನಂದೇ ಇವರೂ ಜನಿಸಿದ್ದು ವಿಶೇಷ. ಶಾರದಾ ಪ್ರಸಾದ್ ಮತ್ತು ರಾಮದುಲಾರಿ ದೇವಿ ಅವರ ಪುತ್ರರಾಗಿ ಜನಿಸಿದರು.ವಾರಣಾಸಿಯ ಕಾಶಿ ವಿದ್ಯಾಪೀಠದಿಂದ ತತ್ವಶಾಸ್ತ್ರ ಮತ್ತು ನೀತಿಶಾಸ್ತ್ರದಲ್ಲಿ ಪ್ರಥಮ ದರ್ಜೆ ಪದವಿ ಪಡೆದ ನಂತರ ಅವರಿಗೆ ‘ಶಾಸ್ತ್ರಿ’ (ವಿದ್ವಾಂಸ) ಎಂಬ ಪದವಿ ನೀಡಲಾಯಿತು. ಮುಂದೆ ಇದೇ ಅವರ ಹೆಸರಿನ ಭಾಗವಾಯಿತು.
ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿ ಮಹಾತ್ಮ ಗಾಂಧೀಜಿಯವರ ಚಿಂತನೆಗಳಿಂದ ಆಕರ್ಷಿತರಾದ ಶಾಸ್ತ್ರೀಯವರು 1920 ರ ದಶಕದಲ್ಲಿ ಸ್ವಾತಂತ್ರ್ಯ ಚಳವಳಿಗೆ ಧಮುಕಿದರು.
ಅವರು ಅಸಹಕಾರ ಚಳವಳಿ (1921), ಉಪ್ಪಿನ ಸತ್ಯಾಗ್ರಹ (1930) ಮತ್ತು ಭಾರತ ಬಿಟ್ಟು ತೊಲಗಿ ಚಳವಳಿಗಳಲ್ಲಿ (1942) ಸಕ್ರಿಯವಾಗಿ ಭಾಗವಹಿಸಿದ್ದರು. ದೇಶದ ಸ್ವಾತಂತ್ರ್ಯಕ್ಕಾಗಿ ಅವರು ಹಲವು ಬಾರಿ ಬ್ರಿಟಿಷರಿಂದ ಬಂಧನಕ್ಕೊಳಗಾಗಿ ಜೈಲು ವಾಸ ಅನುಭವಿಸಿದರು. ನಿಗೂಢವಾಗಿ ಮರಣ ಹೊಂದಿದರು. ದೇಶಕ್ಕೆ ಅವರು ನೀಡಿದ ಅಪ್ರತಿಮ ಕೊಡುಗೆಗಾಗಿ ಅವರಿಗೆ ಮರಣೋತ್ತರವಾಗಿ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ ನೀಡಿ ಗೌರವಿಸಲಾಯಿತು. ಕರ್ನಾಟಕದ ಕೃಷ್ಣಾ ನದಿಗೆ ನಿರ್ಮಿಸಲಾದ ಆಲಮಟ್ಟಿ ಅಣೆಕಟ್ಟಿಗೆ ಇವರ ಗೌರವಾರ್ಥವಾಗಿ ‘ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ’ ಎಂದು ಹೆಸರಿಡಲಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳಿಂದ ವಿವಿಧ ಸ್ಪರ್ಧೆಗಳು ನಡೆಯಿತು ಕೊನೆಯಲ್ಲಿ ಎಲ್ಲರಿಗೂ ಸಿಹಿಯನ್ನು ವಿತರಿಸಲಾಯಿತು.
