ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪ ನಾಯಕಿ ಸ್ಮೃತಿ ಮಂದಾನ ಅವರು ಪಟ್ಟಣದ ಹೋಟೆಲ್ ಒಂದರಲ್ಲಿ ಉಪಹಾರ ಸವಿಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಶ್ರೀ ಕ್ಷೇತ್ರ ಗೋಕರ್ಣ ಮತ್ತು ಶ್ರೀ ಕ್ಷೇತ್ರ ಬಂಗಾರ ಮಕ್ಕಿ ಗೆ ತೆರಳುವ ಮಾರ್ಗ ಮಧ್ಯದಲ್ಲಿ ಪಟ್ಟಣದ ಪೊಲೀಸ್ ಸ್ಟೇಷನ್ ಎದುರಿನ ಶ್ರೀ ರಾಮಕೃಷ್ಣ ಭವನದಲ್ಲಿ ಉಪಹಾರ ಸವಿದರು. ಈ ಸಂದರ್ಭದಲ್ಲಿ ಅವರ ಕುಟುಂಬಸ್ಥರು ಸಹ ಉಪಸ್ಥಿತರಿದ್ದರು.

ಹೋಟೆಲ್ ನಲ್ಲಿ ಉಪಹಾರ ಸವಿದ ಮಂದಾನ ರವರು ತಿಂಡಿಯ ರುಚಿಗೆ ಮೆಚ್ಚುಗೆ ವ್ಯಕ್ತಪಡಿಸಿದರು ಎನ್ನಲಾಗಿದೆ.