ಸುದ್ದಿ ಕನ್ನಡ ವಾರ್ತೆ
ನವದೆಹಲಿ:ಪ್ರಧಾನಿ ನರೇಂದ್ರ ಮೋದಿ (ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿ) ಅವರು ಇಂದು ಸರ್ಕಾರದ ಮುಖ್ಯಸ್ಥರಾಗಿ 25 ವರ್ಷಗಳನ್ನು ಪೂರ್ಣಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ನವದೆಹಲಿಯ ಸರೋಜಿನಿ ನಗರದಲ್ಲಿರುವ ಶ್ರೀ ವಿನಾಯಕ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ದೇಶದ ಸೇವೆಯನ್ನು ಅತ್ಯಂತ ಸಮರ್ಪಣೆ ಹಾಗೂ ನಿಷ್ಠೆಯಿಂದ ಮುಂದುವರಿಸುವ ಸಂಕಲ್ಪವನ್ನು ಪ್ರಧಾನಿ ಮೋದಿ ಅವರು ಈ ಸಂದರ್ಭದಲ್ಲಿ ಪುನರುಚ್ಚರಿಸಿದರು. ಈ ಸಂದರ್ಭದಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳ ಆಯೋಜನೆ ವಿಜೃಂಭಣೆಯಿಂದ ನಡೆಯಿತು.
