Banner Ad

ಸುದ್ದಿ ಕನ್ನಡ ವಾರ್ತೆ
ಉತ್ತರ ಕನ್ನಡ ಜಿಲ್ಲೆಯ ಬಿಡ್ತಿ – ವರದಾ, ಅಘನಾಶಿ _ ವೇದಾವತಿ ನದಿ ಜೋಡಣೆ ಹಾಗೂ ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಗೆ ಸಂಬಂಧಿಸಿ ದಂತೆ ಪಶ್ಚಿಮ ಘಟ್ಟಗಳ ಧಾರಣ ಸಾಮರ್ಥ್ಯ ಕುರಿತು ತಜ್ಞರಿಂದ ವೈಜ್ಞಾನಿಕ ಅಧ್ಯಯನ ನಡೆಸಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಬೇಕು. ಈ ಕುರಿತಂತೆ ಯೋಜನೆಗಳ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಬಾರದು ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ.

ಈ ಕುರಿತಂತೆ ಅವರು ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರಿಗೆ ಪತ್ರ ಬರೆದಿದ್ದು_ ಉತ್ತರ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಜಾರಿಗೊಂಡಿರುವ ಹಲವು ಯೋಜನೆಗಳಿಂದ ಇಂದಿನ ಜನರ ಜೀವನ ಹಾಗೂ ಪರಿಸರದ ಮೇಲೆ ಭಾರಿ ದುಷ್ಪರಿಣಾಮ ಉಂಟಾಗಿದೆ ಎಂದು ತಿಳಿಸಿದ್ದಾರೆ.

Banner Ad

ಜಿಲ್ಲೆಯಲ್ಲಿ ಬಹುತೇಕ ಜನರು ಸಣ್ಣ ಮತ್ತು ಅತಿ ಸಣ್ಣ ಕೃಷಿಕರಾಗಿದ್ದು ಕೃಷಿಯನ್ನೇ ಜೀವನೋಪಾಯಕ್ಕೆ ಅವಲಂಬಿಸಿದ್ದಾರೆ. ಇಂತಹ ಸೂಕ್ಷ್ಮ ಪರಿಸ್ಥಿತಿಯಲ್ಲಿ ಮತ್ತಷ್ಟು ಬೃಹತ್ ಯೋಜನೆಗಳನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಜಾರಿಗೆ ತರುವುದರಿಂದ ಪಶ್ಚಿಮ ಘಟ್ಟಗಳ ಪರಿಸರಕ್ಕೆ ಹಾನಿಯಾಗುವುದರ ಜೊತೆಗೆ ಸ್ಥಳೀಯರ ಜೀವನೋಪಾಯಕ್ಕು ತೊಂದರೆ ಉಂಟಾಗಲಿದೆ. ಇಷ್ಟೇ ಅಲ್ಲದೆ ಇಂತಹ ಬೃಹತ್ ಯೋಜನೆ ಗಳಿಂದ ಜಿಲ್ಲೆಯ ಕೃಷಿ ಕ್ಷೇತ್ರದ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಇದೇ ಜೀವನದಿಗಳನ್ನು ಅವಲಂಬಿಸಿರುವ ಮೀನುಗಾರಿಕೆಯ ಮೇಲು ಈ ಯೋಜನೆಗಳು ಗಂಭೀರ ಪರಿಣಾಮ ಬೀರಬಹುದು ಎಂದು ಎಂದು ಸಂಸದ ಕಾಗೇರಿ ಹೇಳಿದ್ದಾರೆ.

ಈ ಯೋಜನೆಗಳಿಗೆ ಸಂಬಂಧಿಸಿದಂತೆ ಸರ್ಕಾರವು ಕೂಡಲೇ ವೈಜ್ಞಾನಿಕ ಅಧ್ಯಯನ ನಡೆಸಿ ವರದಿ ಪಡೆಯಬೇಕು. ಪಶ್ಚಿಮ ಘಟ್ಟಗಳ ಸೂಕ್ಷ್ಮ ಪ್ರದೇಶಗಳ ಧಾರಣ ಸಾಮರ್ಥ್ಯ ಕುರಿತು ತಜ್ಞ ವಿಜ್ಞಾನಿಗಳಿಂದ ವೈಜ್ಞಾನಿಕ ಅಧ್ಯಯನ ನಡೆಸಬೇಕು ಎಂಬ ಬೇಡಿಕೆ ಈ ಹಿಂದಿನಿಂದಲೂ ಇದೆ. ಈ ಸಮಗ್ರ ಅಧ್ಯಯನದ ವರದಿ ಬರುವವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪರಿಸರಕ್ಕೆ ಹಾನಿಕಾರಕವಾಗಿರುವ ಹೊಸ ಯೋಜನೆಗಳನ್ನು ಕೈಗೊತ್ತಿಕೊಳ್ಳಬಾರದು ಎಂಬುದು ಉತ್ತರ ಕನ್ನಡ ಜಿಲ್ಲೆಯ ಜನರ ಹಾಗೂ ತಮ್ಮ ಸ್ಪಷ್ಟ ನಿಲುವಾಗಿದೆ ಎಂದು ಸಂಸದ ಕಾಗೇರಿ ರವರು ಕರ್ನಾಟಕ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಗೆ ಮಾರಕವಾಗಿರುವ ಈ ಯೋಜನೆಗಳ ವಿರುದ್ಧ ಪೂಜ್ಯ ಮಠಾಧೀಶರುಗಳ ಮಾರ್ಗದರ್ಶನದಲ್ಲಿ ನಿರಂತರ ಹೋದ ಹೋರಾಟ ಗಳು ನಡೆಯುತ್ತಲೇ ಇದೆ. ಬೆಂಗಳೂರಿನಲ್ಲಿಯೂ ಪ್ರತಿಭಟನೆ ನಡೆದಿದೆ. ಜನರಹಿತ ಮತ್ತು ಪರಿಸರ ರಕ್ಷಣೆ ದೃಷ್ಟಿಯಿಂದ ಈ ಯೋಜನೆಗಳ ಡಿಪಿಆರ್ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಉತ್ತರ ಕನ್ನಡ ಜಿಲ್ಲೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೆರಿ ಕರ್ನಾಟಕದ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.

Banner Ad