ಸುದ್ಧಿಕನ್ನಡ ವಾರ್ತೆ
ಯಲ್ಲಾಪುರ: ತಾಲೂಕಿನ ಮಲವಳ್ಳಿಯ ಶ್ರೀ ರಾಮಲಿಂಗೇಶ್ವರ ದೇವರ  ಸನ್ನಿಧಿಯಲ್ಲಿ  ಶ್ರೀ ರಾಮಲಿಂಗೇಶ್ವರ ಭಜನಾ ಮಂಡಳಿ ಮಲವಳ್ಳಿ ಹಾಗೂ ಶ್ರೀ ರಾಜರಾಜೇಶ್ವರಿ ಮಹಿಳಾ ಮಂಡಳದ ವತಿಯಿಂದ ಹಾಗೂ ಸಮಸ್ತ ಊರ ನಾಗರೀಕರ ಆಶ್ರಯದಲ್ಲಿ ಕಾರ್ತಿಕ ದೀಪೋತ್ಸವ ಹಾಗೂ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ತಿಕ ದೀಪೋತ್ಸವ ಕಾರ್ಯಕ್ರಮವು ನವೆಂಬರ್ 29 ರಿಂದ ಡಿಸೆಂಬರ್ 1 ರವರೆಗೆ ಪ್ರತಿದಿನ 6 ಗಂಟೆಗೆ ಪ್ರಾರಂಭವಾಗಲಿದೆ. ಎಲ್ಲಾ ಭಕ್ತರೂ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.