Banner Ad

ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ: ಜಿಲ್ಲೆಯಲ್ಲಿ ತಲೆದೋರಿರುವ ಬರಗಾಲ ಪರಿಸ್ಥಿತಿ ದೂರವಾಗಲು ಹಾಗೂ ಉತ್ತಮ ಮಳೆಗಾಗಿ ಪ್ರಾರ್ಥಿಸಿ ಲೋಕಕಲ್ಯಾಣಾರ್ಥವಾಗಿ ತಾಲೂಕಿನ ಇಡಗುಂದಿಯ ಚಿನ್ನಾಪುರದ ಶ್ರೀ ಚಿನ್ನೇಶ್ವರ ದೇವಸ್ಥಾನದಲ್ಲಿ ಶನಿವಾರ ಪರ್ಜನ್ಯ ಹೋಮ ನಡೆಸಲಾಯಿತು.

ವೈದಿಕರು ಮತ್ತು ಸ್ಥಳೀಯರ ಸಹಕಾರದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಪರ್ಜನ್ಯ ಹೋಮ, ಜಪ ಅನುಷ್ಠಾನ, ನೆರವೇರಿಸಲಾಯಿತು.

Banner Ad
Banner Ad