Banner Ad

ಸುದ್ದಿ ಕನ್ನಡ ವಾರ್ತೆ
​ಶಿರಸಿ: ನಗರದ ಮುಸ್ಲಿಂ ಗಲ್ಲಿಯಲ್ಲಿ ಗೋಮಾಂಸ ಸಾಗಾಟ ಮಾಡುತ್ತಿರುವ ವೇಳೆ ಖಚಿತ ಮಾಹಿತಿ ಮೇರೆಗೆ ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿ, ಕ್ರೇಟಾ ಕಾರು ಹಾಗೂ ಸುಮಾರು 57 ಕೆ.ಜಿ. ಮಾಂಸವನ್ನು ವಶಪಡಿಸಿ ಕೊಳ್ಳಲಾಗಿದೆ.

 

Banner Ad

ನಗರದ ಮುಸ್ಲಿಂಗಲ್ಲಿಯ ಕಲಾಮ್ ವುಲ್ಲಾ(78) ಹಾಗೂ ಇನಾಮ್ ವುಲ್ಲಾ(45) ಬಂಧಿತ ವ್ಯಕ್ತಿಗಳು. ನಗರದ ಮುಸ್ಲಿಂಗಲ್ಲಿಯಲ್ಲಿ ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಇಬ್ಬರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲೆಯ ಅಕ್ಕಿಆಲೂರಿನಲ್ಲಿರುವ ಇತರ ಆರೋಪಿಗಳ ಪತ್ತೆಗಾಗಿ ತಂಡ ರಚಿಸಲಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ.

 

ಈ ಕುರಿತು ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ ಹಾಗೂ ಶಿರಸಿ ಡಿವೈಎಸ್‍ಪಿ ಗೀತಾ ಪಾಟೀಲ ಮಾರ್ಗದರ್ಶನದಲ್ಲಿ ಸಿಪಿಐ ಇ.ಸಿ.ಸಂಪತ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಗುರುರಾಜ್, ರಾಮದೇವ, ಅಶೋಕ, ಮಹಾದೇವ ಹಾಗೂ ಶಿವಾನಂದ ಪಾಲ್ಗೊಂಡಿದ್ದರು.

Banner Ad