Banner Ad

ಸುದ್ದಿ ಕನ್ನಡ ವಾರ್ತೆ

ಜೋಯಿಡಾ :ಪಶ್ಚಿಮ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ನಿಮಿತ್ತ ಆರೋಗ್ಯ ಇಲಾಖೆ ಸಿಬ್ಬಂದಿಗೆ ಮತದಾನ ಜಾಗೃತಿ ಕಾರ್ಯಕ್ರಮ
ನಡೆಯಿತು .ಇಂದು 14 ಅಕ್ಟೋಬರ್ 2026 ರಂದು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಜೋಯಿಡಾ ದಲ್ಲಿ ಈ ಕಾರ್ಯಕ್ರಮ ನಡೆಯಿತು.

Banner Ad

 

ತಾಲೂಕು ಪಂಚಾಯತ್ ಹಾಗೂ ತಾಲೂಕು SVEEP ಸಮಿತಿ, ಜೋಯಿಡಾ ಇವರು ಕಾರ್ಯಕ್ರಮ ಸಂಘಟಿಸಿದ್ದರು.
ತಾಲೂಕು ಪಂಚಾಯತ್ ಹಾಗೂ ತಾಲೂಕು SVEEP ಜೋಯಿಡಾ ಸಮಿತಿಯ ವತಿಯಿಂದ ಪಶ್ಚಿಮ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿ ವರ್ಗದವರಿಗೆ ಮತದಾನ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು SVEEP ನೋಡಲ್ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಭಾರತಿ ಎನ್. ಅವರು ಮತದಾನ ಕೇಂದ್ರ, ಕರಡು ಮತದಾರರ ಪಟ್ಟಿ, ಮತದಾನ ಪ್ರಕ್ರಿಯೆ ಹಾಗೂ ಮತದಾನದ ವಿಧಾನಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು. ಅರ್ಹ ಮತದಾರರು ಚುನಾವಣಾ ಪ್ರಕ್ರಿಯೆಯ ಬಗ್ಗೆ ಅರಿವು ಹೊಂದಿ, ತಮ್ಮ ಮತದಾನದ ಹಕ್ಕನ್ನು ಜವಾಬ್ದಾರಿಯುತವಾಗಿ ಚಲಾಯಿಸುವ ಮಹತ್ವವನ್ನು ತಿಳಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Banner Ad