ಸುದ್ದಿ ಕನ್ನಡ ವಾರ್ತೆ

ಭರಮಸಾಗರ: ಸಮೀಪದ ಕಡ್ಲೆಗುದ್ದು ಗ್ರಾಮದಲ್ಲಿ ಕೆಲ ದಿನಗಳಿಂದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ನಿದ್ದೆಗೆಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿಸಿದ್ದಾರೆ.

 

ಕೆಲ ದಿನಗಳಿಂದ ಚಿರತೆಯ ಓಡಾಟದ ಕುರಿತು ಗ್ರಾಮಸ್ಥರು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿಗಳು ಹನುಮಂತ ಪ್ಪ ಎಂಬುವರ ಜಮೀನಿನಲ್ಲಿ ಚಿರತೆ ಬೋನನ್ನು ಇರಿಸಿದ್ದರು. ಚಿರತೆ ಬೋನಿನಲ್ಲಿ ಲಾಕ್ ಆಗುವ ಮೂಲಕ ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

 

ಸೆರೆ ಹಿಡಿದ ಚಿರತೆಯನ್ನು ಚಿತ್ರದುರ್ಗ ದ ಆಡುಮಲ್ಲೇಶ್ವರ ಕಿರು ಮೃಗಾಲಯ ಕ್ಕೆ ಸ್ಥಳಾಂತರ ಮಾಡಲಾಗುತ್ತದೆ ಎಂದು ಚಿರತೆ ಅಪರೇಷನ್ ಕಾರ್ಯದಲ್ಲಿ ಪಾಲ್ಗೊಂಡ ಅರಣ್ಯ ಇಲಾಖೆ ಅಧಿಕಾರಿ ಪ್ರದೀಪ್ ಕೇಸರ್ ನೇತೃತ್ವದ ತಂಡ ಮಾಹಿತಿ ನೀಡಿದೆ.