Banner Ad

ಸುದ್ದಿಕನ್ನಡ ವಾರ್ತೆ
ಪಣಜಿ: ಗೋವಾ ಕನ್ನಡ ಸಮಾಜ ಪಣಜಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕರ್ನಾಟಕ ಸರ್ಕಾರ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 20 ರಂದು ಮಂಗಳವಾರ ಸಂಜೆ 4 ಗಂಟೆಗೆ ಪಣಜಿಯ ಪೊಮೆಂಟೊ ಸಭಾಗೃಹದಲ್ಲಿ “ದಸರಾ ಸಂಭ್ರಮ” ದುರ್ಗಾಪೂಜೆ ಹಾಗೂ ಬನ್ನಿ ವಿನಿಮಯ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಮಾರಂಭದ ಉಧ್ಘಾಟಕರಾಗಿ ಭಾರತ ಸರ್ಕಾರದ ಆದಾಯ ತೆರಿಗೆ ನಿರೀಕ್ಷಕರಾದ ಬಿ.ಎಂ.ಸುಮನ್, ಮುಖ್ಯ ಅತಿಥಿಗಳಾಗಿ ಗೋವಾದ ಭಾರತೀಯ ಜೈನ ಸಂಘಟನೆಯ ರಾಜ್ಯಾಧ್ಯಕ್ಷರಾದ ಭರತ್ ಪಾಟೀಲ್ ರವರು ಉಪಸ್ಥಿತರಿರುವರು.
ಸಭಾ ಕಾರ್ಯಕ್ರಮದ ನಂತರ ಶ್ರೀಕೃಷ್ಣವೇಣಿ ಸಾಂಸ್ಕøತಿಕ ವೃಂದದವರಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಲಿದೆ. ಈ ಕಾರ್ಯಕ್ರಮಕ್ಕೆ ಕನ್ನಡಿಗರು ಹಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಗೋವಾ ಕನ್ನಡ ಸಮಾಜದ ಅಧ್ಯಕ್ಷ ಅರುಣಕುಮಾರ್, ಕಾರ್ಯದರ್ಶಿ ಶ್ರೀಕಾಂತ ಲೋಣಿ ಪ್ರಕಟಣೆಯಲ್ಲಿ ಕೋರಿದ್ದಾರೆ.

Banner Ad
Banner Ad