ಸುದ್ದಿ ಕನ್ನಡ ವಾರ್ತೆ
ಶಿರಸಿ: ಉತ್ತರ ಕನ್ನಡ ಜಿಲ್ಲಾ ತುಟುಕು ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷರಾಗಿ ಶಿರಸಿ ತಾಲೂಕಿನ ವರ್ಗಾಸರ ಗಣಪತಿ ಭಟ್ ರವರು ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಹುಡುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿಯ ಧರ್ಮದರ್ಶಿಗಳ ಸಭೆಯಲ್ಲಿ ಅಧಿಕೃತವಾಗಿ ಅನುಮೋದಿಸಲಾಗಿದೆ ಎಂದು ಕೇಂದ್ರ ಸಮಿತಿ ಅಧ್ಯಕ್ಷ ತೋಂಟದಾರ್ಯ ರವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ನೂತನ ಅಧ್ಯಕ್ಷರಿಗೆ ಉತ್ತರ ಕನ್ನಡ ಜಿಲ್ಲಾ ಘಟಕಕ್ಕೆ ಅಗತ್ಯವಿರುವ ಪದಾಧಿಕಾರಿಗಳನ್ನು ನಿಯಮಾನುಸಾರ ಆಯ್ಕೆ ಮಾಡಿಕೊಳ್ಳುವ ಸಂಪೂರ್ಣ ಅಧಿಕಾರವನ್ನು ನೀಡಲಾಗಿದೆ.
ಸಾಹಿತ್ಯ, ಸಾರ್ವಜನಿಕ ಕ್ಷೇತ್ರ, ಸಾಂಸ್ಕೃತಿಕ, ಯಕ್ಷಗಾನ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಸೇವೆಯ ಮೂಲಕ ಚಿರಪರಿಚಿತರಾಗಿದ್ದಾರೆ.
