ಸುದ್ದಿ ಕನ್ನಡ ವಾರ್ತೆ
ಕಾರವಾರ: ಇಂದಿನ ಮದಗಾ ಮೀನುಗಾರಿಕಾ ಬಂದರಿನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಮತ್ತೊಂದು ದುರ್ಘಟನೆ ಸಂಭವಿಸಿದೆ. ಬೊಟ್ನಲ್ಲಿ ಕೋಲ್ಡ್ ಸ್ಟೋರೇಜ್ ನಲ್ಲಿದ್ದ ಮೀನು ಖಾಲಿ ಮಾಡುವಾಗ ಇಬ್ಬರೂ ಮೀನುಗಾರರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಶನಿವಾರ ಬೆಳಗ್ಗೆ 6:30ರ ಸುಮಾರು ಮೂಕಾಂಬಿಕಾ ಎಂಬ ಹೆಸರಿನ ಬೋಟ್ನಲ್ಲಿ ಕೋಲ್ಡ್ ಸ್ಟೋರೇಜ್ ನಲ್ಲಿದ್ದ ಮೀನನ್ನು ಹೊರತೆಗೆಯುತ್ತಿರುವ ಸಂದರ್ಭದಲ್ಲಿ ಮೀನುಗಾರರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಮತ್ತೋರ್ವ ಬಿನುದಾರ ಅಸ್ವಸ್ಥಗೊಂಡಿದ್ದಾನೆ. ಈ ಘಟನೆಯಲ್ಲಿ ಒರಿಸ್ಸಾ ಮೂಲದ ಪುರಂದರ ಬಿಸರ, ಆಕಾಶ್ ನಾಯಕ್ ಸಾವನ್ನಪ್ಪಿದ್ದಾರೆ.
ಇವರನ್ನು ಕೂಡಲೇ ಕಾರವಾರದ ಕಿಂಸ ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಪಾಲಿಸದೆ ಇಬ್ಬರು ಸಾವನ್ನಪ್ಪಿದ್ದಾರೆ. ಕಾರವಾರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ಕ್ರಮ ಜರುಗಿಸಿದ್ದಾರೆ.
