ಸುದ್ದಿ ಕನ್ನಡ ವಾರ್ತೆ
ಬೆಂಗಳೂರು: ಕರ್ನಾಟಕದಲ್ಲಿ ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ನಂತರ ಇದೀಗ ಸಾರಿಗೆ ಬಸ್ ಪ್ರಯಾಣ ದರವು ಗರಿಷ್ಠ 9ರೂವರೆಗೆ ಹೆಚ್ಚಳವಾಗಿದ್ದು, ಪರಿಷ್ಕೃತ ದರ ಇಂದು ಮಧ್ಯರಾತ್ರಿ ಇಂದಲೇ ಜಾರಿಗೆ ಬರಲಿದೆ. ಇದರಿಂದಾಗಿ ಇದೀಗ ಹಾಲಿನ ನಂತರ ಬಸ್ ಪ್ರಯಾಣದರ ಕೂಡ ಜನತೆಗೆ ಹೊರೆಯಾಗಲಿದೆ.
ಕೆ ಎಸ್ ಆರ್ ಟಿ ಸಿ ಮತ್ತು ಬಿ ಎಂ ಟಿ ಸಿ ಬಸ್ಗಳ ಪ್ರಯಾಣ ದರದಲ್ಲಿ ಹೆಚ್ಚಳ ಮಾಡಲಾಗಿದೆ. ಬಿ ಎಂ ಟಿ ಸಿ ಯಲ್ಲಿ ಈ ಹಿಂದೆ ಪ್ರತಿಷ್ಟೆಗೆ 6 ರೂಪಾಯಿ ಇದ್ದ ಟಿಕೆಟ್ ದರವನ್ನು ಇದೀಗ 10 ರೂಪಾಯಿಗೆ ಏರಿಕೆ ಮಾಡಲಾಗಿದೆ. ಆದರೆ ಇದನ್ನು ಸಮರ್ಥಿಸಿಕೊಂಡು ಒಟ್ಟು ನಿಗಮಗಳ ಆರ್ಥಿಕ ನಷ್ಟವನ್ನು ಸರಿದೂಗಿಸಲು ಈ ಕ್ರಮ ಅನಿವಾರ್ಯ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ.
ಕಳೆದ ಎರಡು ದಿನಗಳ ಹಿಂದಷ್ಟೇ ನಂದಿನಿ ಹಾಲು ಮತ್ತು ಮೊಸರಿನ ಬೆಲೆ ಏರಿಕೆ ಆಗಿರುವುದರಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಬಸ್ ಟಿಕೆಟ್ ದರ ಕೂಡ ಹೆಚ್ಚಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.
ಸಾರಿಗೆ ನಿಗಮಗಳನ್ನು ನಷ್ಟದಿಂದ ಪಾರು ಮಾಡಲು ಮತ್ತು ನೌಕರರ ನಿರ್ವಹಣೆಗಾಗಿ ದರ ಪರಿಷ್ಕರಣೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರವು ಸಮರ್ಥಿಸಿಕೊಂಡಿದೆ.
